ಬೀದರ್:ಲಾಕ್ಡೌನ್ ನಡುವೆ ಪಡಿತರ ಅಕ್ಕಿಯನ್ನು ಅಕ್ರಮವಾಗಿ ಕಾಳಸಂತೆಯಲ್ಲಿ ಮಾರಾಟ ಮಾಡಲು ಸಾಗಿಸುತ್ತಿದ್ದ ಲಾರಿಯೊಂದನ್ನು ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಬೀದರ್‌ನಲ್ಲಿ ಪಡಿತರ ಅಕ್ಕಿ ಅಕ್ರಮ ಸಾಗಾಟ: ಆರೋಪಿ ಅರೆಸ್ಟ್ - ration rice
ಅಕ್ರಮವಾಗಿ 70 ಕ್ವಿಂಟಲ್ ಪಡಿತರ ಅಕ್ಕಿ ಸಾಗಾಟ ಮಾಡುತ್ತಿದ್ದ ಆರೋಪಿಯನ್ನು ಬೀದರ್‌ನಲ್ಲಿ ಆಹಾರ ಮತ್ತು ನಾಗರೀಕ ಸರಬರಾಜು ಇಲಾಖೆ ಅಧಿಕಾರಿಗಳು ಬಂಧಿಸಿದ್ದಾರೆ.

ಪಡಿತರ ಅಕ್ಕಿ ಅಕ್ರಮ ಸಾಗಾಟ
ಪಡಿತರ ಅಕ್ಕಿ ಅಕ್ರಮ ಸಾಗಾಟ ಪ್ರಕರಣ
ಜಿಲ್ಲೆಯ ಮನ್ನಳ್ಳಿ ಗ್ರಾಮದ ಬಳಿ ಅಕ್ರಮವಾಗಿ 70 ಕ್ವಿಂಟಲ್ ಪಡಿತರ ಅಕ್ಕಿ ಸಾಗಾಟ ಮಾಡಲಾಗ್ತಿತ್ತು. ಈ ಬಗ್ಗೆ ಖಚಿತ ಮಾಹಿತಿ ಪಡೆದ ಇಲಾಖೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.
ಕಳೆದ ನಾಲ್ಕು ದಿನಗಳ ಹಿಂದೆ ಆಹಾರ ಇಲಾಖೆ ಅಧಿಕಾರಿಗಳು ದಾಳಿ ಮಾಡಿ 28 ಟನ್ ಅಕ್ಕಿ ಹಾಗೂ 7.5 ಟನ್ ಗೋಧಿ ಜಪ್ತಿ ಮಾಡಿದ್ದರು.