ಬಸವಕಲ್ಯಾಣ: ಅಕ್ರಮವಾಗಿ ಗಾಂಜಾ ಸಾಗಾಟ ಮಾಡುತ್ತಿದ್ದ ವೃದ್ಧನೊಬ್ಬನನ್ನು ನಗರ ಠಾಣೆ ಪೊಲೀಸರು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ.
ಅಕ್ರಮವಾಗಿ ಗಾಂಜಾ ಸಾಗಾಟ: ಓರ್ವ ಅರೆಸ್ಟ್ - Illegal marijuana saleing
ಅಕ್ರಮವಾಗಿ ಗಾಂಜಾ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ಬಸವಕಲ್ಯಾಣ ನಗರ ಠಾಣೆ ಪೊಲೀಸರು ದಾಳಿ ನಡೆಸಿ, ಆರೋಪಿಯನ್ನು ಬಂಧಿಸಿದ್ದಾರೆ.
Arrest
ತಾಲೂಕಿನ ಕಿಟ್ಟಾ ಗ್ರಾಮದ ಖಂಡೆಪ್ಪ ರಾಯಪ್ಪ ಸಸ್ತಾಪೂರೆ (60) ಬಂಧಿತ ಆರೋಪಿ. ನಾರಾಯಣಪುರ ಕ್ರಾಸ್ ಸಮೀಪ ಅಕ್ರಮವಾಗಿ ಗಾಂಜಾ ಸಾಗಿಸಲಾಗುತ್ತಿದೆ ಎನ್ನುವ ಖಚಿತ ಮಾಹಿತಿ ಮೇರೆಗೆ ನಗರ ಠಾಣೆ ಪಿಎಸ್ಐ ಸುನಿಲ ಕುಮಾರ ನೇತೃತ್ವದ ಪೊಲೀಸರ ತಂಡ ದಾಳಿ ನಡೆಸಿ ಆರೋಪಿಯನ್ನು ಬಂಧಿಸಿದೆ.
ಇನ್ನು ಬಂಧಿತನಿಂದ 22 ಸಾವಿರ ರೂ. ಮೌಲ್ಯದ 2.25 ಕೆಜಿ ಗಾಂಜಾ ವಶಪಡಿಸಿಕೊಂಡು, ಆರೋಪಿಯನ್ನು ನ್ಯಾಯಾಂಗ ಬಂಧಿನಕ್ಕೆ ಒಪ್ಪಿಸಲಾಗಿದೆ. ಈ ಕುರಿತು ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.