ಬೀದರ್: ಗಡಿ ಜಿಲ್ಲೆಯಲ್ಲಿ ಶಿಕ್ಷಣ ಪಡೆಯುತ್ತಿರುವ ವಿದ್ಯಾರ್ಥಿಗಳಿಗೆ ನಾಗರಿಕ ಸೇವೆಗಳಿಗೆ ಸಂಬಂಧಿಸಿದ ಪರೀಕ್ಷೆಗಳ ಕುರಿತು ಅರಿವು ಮೂಡಿಸುವ ವಿಶೇಷ ಕಾರ್ಯಕ್ರಮ ಆಯೋಜಿಸಲಾಗಿದೆ. ಪ್ರತಿಭಾವಂತ ವಿದ್ಯಾರ್ಥಿಗಳ ಭವಿಷ್ಯ ರೂಪಿಸಲು ಜಿಲ್ಲಾಡಳಿತ ಸಹಕಾರಿಯಾಗಲಿದೆ ಎಂದು ಜಿಲ್ಲಾಧಿಕಾರಿ ರಾಮಚಂದ್ರನ್ ಆರ್ ಅವರು ಹೇಳಿದ್ದಾರೆ.
ನಗರದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಮಾತನಾಡಿದ ಅವರು, ಈ ಹಿಂದೆ ಜಿಲ್ಲಾಧಿಕಾರಿಯಾಗಿದ್ದ ಪಿ ಸಿ ಜಾಫರ್ ಅವಧಿಯಲ್ಲಿ ಇಂಥ ಪ್ರಯತ್ನ ಮಾಡಲಾಗಿತ್ತು. ಅದನ್ನೇ ಮುಂದುವರಿಸಲಾಗಿದೆ. ಜಿಲ್ಲಾ ರಂಗಮಂದಿರಲ್ಲಿ ಜೂನ್ 26 ರಂದು ಬೆಳಗ್ಗೆ 9 ರಿಂದ ಮಧ್ಯಾಹ್ನ 2.30 ಗಂಟೆವರೆಗೆ ಜಾಗೃತಿ ಕಾರ್ಯಕ್ರಮ ನಡೆಯಲಿದೆ ಎಂದರು.