ಬೀದರ್: ಕೊವಿಡ್-19 ಅಟ್ಟಹಾಸಕ್ಕೆ ಗಡಿ ಜಿಲ್ಲೆ ಬೀದರ್ನಲ್ಲಿ ಮತ್ತೊಂದು ಬಲಿಯಾಗಿದೆ. ಹೌದು, ನಗರದ ಓಲ್ಡ್ ಸಿಟಿಯ ನಿವಾಸಿಯೊಬ್ಬರು ಸಾವನ್ನಪ್ಪಿದ್ದು, ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.
ಬೀದರ್ನಲ್ಲಿ ಕೊರೊನಾಗೆ ಮತ್ತೊಂದು ಬಲಿ!
ನಗರದ ಓಲ್ಡ್ ಸಿಟಿಯ 47 ವರ್ಷದ ಪುರುಷರೊಬ್ಬರು ಕಿಡ್ನಿ, ಶುಗರ್ ಹಾಗೂ ಉಸಿರಾಟದ ತೊಂದರೆಯಿಂದ ಜೂ. 14ರಂದು ಬ್ರೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದರು. ನಂತರ ಅವರ ಗಂಟಲು ದ್ರವ ಪರೀಕ್ಷೆ ವರದಿಯಲ್ಲಿ ಸೋಂಕು ತಗುಲಿರುವುದು ದೃಢವಾಗಿದೆ.
Corona case of bidar
ನಗರದ ಓಲ್ಡ್ ಸಿಟಿಯ 47 ವರ್ಷದ ಪುರುಷರೊಬ್ಬರು ಕಿಡ್ನಿ, ಶುಗರ್ ಹಾಗೂ ಉಸಿರಾಟದ ತೊಂದರೆಯಿಂದ ಜೂ. 14ರಂದು ಬ್ರೀಮ್ಸ್ ಆಸ್ಪತ್ರೆಗೆ ದಾಖಲಾಗಿದ್ದು, ಆಸ್ಪತ್ರೆಯಲ್ಲೇ ಸಾವನ್ನಪ್ಪಿದ್ದರು.
ನಂತರ ಕೊರೊನಾ ವೈರಾಣು ನಿಯಂತ್ರಣ ನಿಯಮದಂತೆ ಅಂತ್ಯಕ್ರಿಯೆ ಮಾಡಲಾಗಿದ್ದು, ಮೃತ ವ್ಯಕ್ತಿಯ ಗಂಟಲು ಹಾಗೂ ರಕ್ತದ ಮಾದರಿಯನ್ನು ಪರೀಕ್ಷೆಗೆ ಒಳಪಡಿಸಿದಾಗ ಸೋಂಕು ಇರುವುದು ದೃಢಪಟ್ಟಿದೆ. ಈ ಮೂಲಕ ಜಿಲ್ಲೆಯಲ್ಲಿ ಕೊರೊನಾಗೆ ಬಲಿಯಾದವರ ಸಂಖ್ಯೆ 7ಕ್ಕೆ ಏರಿಕೆಯಾಗಿದೆ.