ಕರ್ನಾಟಕ

karnataka

ಬೀದರ್​​​ನ ಮತ್ತೋರ್ವನಲ್ಲಿ ಕೊರೊನಾ ಸೋಂಕು ಪತ್ತೆ

By

Published : Jun 6, 2020, 10:55 PM IST

ಕಳೆದ ವಾರ ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಿದ್ದ ವ್ಯಕ್ತಿ ತದನಂತರ ಬಸ್​​ನಲ್ಲಿ ಬೀದರ್​ಗೆ ಆಗಮಿಸಿದ್ದ, ಇದೀಗ ಈತನಲ್ಲಿ ಕೊರೊನಾ ಪಾಸಿಟಿವ್​​ ವರದಿಯಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಅಲ್ಲದೆ ಸಂಪರ್ಕಿತರನ್ನು ಪತ್ತೆ ಮಾಡಲಾಗುತ್ತಿದೆ.

One more coronavirus positive reported in Bidar
ಬೀದರ್​​​ನ ಮತ್ತೋರ್ವನಲ್ಲಿ ಕೊರೊನಾ ಸೋಂಕು ಪತ್ತೆ

ಬೀದರ್:ದೆಹಲಿಯಿಂದ ಬೆಂಗಳೂರಿಗೆ ಬಂದು ಬೆಂಗಳೂರಿನಿಂದ ಬೀದರ್​ವರೆಗೆ ಸಾರಿಗೆ ಸಂಸ್ಥೆ ಬಸ್​ನಲ್ಲಿ ಪ್ರಯಾಣಿಸಿದ ವ್ಯಕ್ತಿಯಲ್ಲಿ ಸೋಂಕು ದೃಢವಾಗಿದ್ದು, ಪ್ರಾಥಮಿಕ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚವುದು ಅಧಿಕಾರಿಗಳಿಗೆ ತಲೆನೋವಾಗಿ ಪರಿಣಮಿಸಿದೆ.

ಪಿ-4864, 28 ವಯಸ್ಸಿನ ವ್ಯಕ್ತಿಯಲ್ಲಿ ಸೋಂಕು ಪತ್ತೆಯಾಗಿದೆ. ಈತ ಕಳೆದ ವಾರ ದೆಹಲಿಯಿಂದ ಬೆಂಗಳೂರಿಗೆ ಪ್ರಯಾಣ ಮಾಡಿದ್ದು, ಬೆಂಗಳೂರಿನಲ್ಲಿ ಕ್ವಾರಂಟೈನ್ ಮಾಡಲಾಗಿತ್ತು. ಆದರೆ 5 ದಿನಗಳ ಕ್ವಾರಂಟೈನ್ ಮುಗಿಸಿದ ನಂತರ ಈತನನ್ನು ಮನೆಗೆ ಹೋಗುವಂತೆ ಹೇಳಲಾಗಿದೆ.

ಈ ಹಿನ್ನೆಲೆಯಲ್ಲಿ ಸಾರಿಗೆ ಬಸ್​ನಲ್ಲಿ ಕಳೆದ ಮೂರು ದಿನಗಳ ಹಿಂದೆ ಬೆಂಗಳೂರಿನಿಂದ ಬೀದರ್​​ಗೆ ಪ್ರಯಾಣ ಮಾಡಿದ್ದಾನೆ. ಬೀದರ್​ ಬಂದ ಮೇಲೆ ಸ್ವಯಂ ಪ್ರೇರಿತವಾಗಿ ಗಂಟಲು ದ್ರವ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇಂದು ಬಂದ ಪರೀಕ್ಷಾ ವರದಿಯಲ್ಲಿ ಪಾಸಿಟಿವ್ ಧೃಢವಾಗಿದೆ.

ಈ ಸೋಂಕಿತ ವ್ಯಕ್ತಿಯ ಟ್ರಾವಲಿಂಗ್​​ ಹಿಸ್ಟರಿ ತುಂಬಾನೆ ವಿಚಿತ್ರವಾಗಿದಕ್ಕೆ ಪ್ರಾಥಮಿಕ ಹಾಗೂ ಎರಡನೇ ಹಂತದ ಸಂಪರ್ಕಕ್ಕೆ ಬಂದವರನ್ನು ಪತ್ತೆ ಹಚ್ಚಬೇಕಾಗಿದೆ.

ಬೀದರ್​​​​ನಲ್ಲಿಂದು 33 ಜನರು ಗುಣಮುಖರಾಗಿ ಮನೆಗೆ ತೆರಳಿದ್ದಾರೆ. ಈ ಮೂಲಕ 74 ಜನರು ಗುಣಮುಖರಾದಂತಾಗಿದ್ದು, ಸೋಂಕಿತರ ಸಂಖ್ಯೆ 215ಕ್ಕೆ ಏರಿಕೆಯಾಗಿದೆ. ಸದ್ಯ ಜಿಲ್ಲೆಯಲ್ಲಿ ಸೋಂಕಿನಿಂದ 6 ಜನರು ಸಾವನಪ್ಪಿದ್ದು, 135 ಜನರಿಗೆ ಚಿಕಿತ್ಸೆ ಮುಂದುವರಿದಿದೆ.

ABOUT THE AUTHOR

...view details