ಬೀದರ್: ಪೌರತ್ವ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಮಾಡಿ ಪೇಚಿಗೆ ಸಿಲುಕಿ ಜೈಲಿನಲ್ಲಿರುವ ಶಾಹೀನ್ ಶಿಕ್ಷಣ ಸಂಸ್ಥೆ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಯ ತಾಯಿಯನ್ನು ಎಂಐಎಂ ಪಕ್ಷದ ಅಧ್ಯಕ್ಷ, ಸಂಸದ ಅಸಾದುದ್ದೀನ್ ಓವೈಸಿ ಭೇಟಿ ಮಾಡಿದರು.
ಜೈಲಿನಲ್ಲಿರುವ ಶಾಹೀನ್ ಕಾಲೇಜು ಶಿಕ್ಷಕಿಯನ್ನು ಭೇಟಿ ಮಾಡಿದ ಓವೈಸಿ! - ಓವೈಸಿ ಕಾರಾಗೃಹಕ್ಕೆ ಭೇಟಿ
ಪೌರತ್ವ ಕಾಯ್ದೆ ವಿರೋಧಿಸಿ ನಾಟಕ ಪ್ರದರ್ಶನ ಮಾಡಿ ಪೇಚಿಗೆ ಸಿಲುಕಿ ಜೈಲಿನಲ್ಲಿರುವ ಶಾಹೀನ್ ಶಿಕ್ಷಣ ಸಂಸ್ಥೆ ಶಿಕ್ಷಕಿ ಹಾಗೂ ವಿದ್ಯಾರ್ಥಿನಿಯ ತಾಯಿಯನ್ನು ಅಸಾದುದ್ದೀನ್ ಓವೈಸಿ ಭೇಟಿ ಮಾಡಿದ್ದಾರೆ.
ಓವೈಸಿ ಕಾರಾಗೃಹಕ್ಕೆ ಭೇಟಿ
ನಗರದ ಜಿಲ್ಲಾ ಕಾರಾಗೃಹದಲ್ಲಿ ವಿಚಾರಣಾಧೀನ ಕೈದಿಗಳಾಗಿರುವ ಶಾಹೀನ್ ಸಂಸ್ಥೆಯ ಮುಖ್ಯ ಶಿಕ್ಷಕಿ ಫರೀದಾ ಬೇಗಂ ಹಾಗೂ ಪ್ರಧಾನಿ ಮೋದಿ ಅವರಿಗೆ ನಿಂದಿಸಿ ನಾಟಕದಲ್ಲಿ ಪಾತ್ರ ಮಾಡಿದ ವಿದ್ಯಾರ್ಥಿನಿಯೊಬ್ಬಳ ತಾಯಿ ನಬಿದಾ ಬೇಗಂ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದರು.
ನಂತರ ಜಿಲ್ಲಾ ಪೊಲೀಸ್ ವರೀಷ್ಠಾಧಿಕಾರಿ ಶ್ರೀಧರ್ ಟಿ. ಅವರನ್ನು ಕಚೇರಿಯಲ್ಲಿ ಭೇಟಿ ಮಾಡಿದ ಅಸಾದುದ್ದೀನ್ ಓವೈಸಿ, ಯಾವ ಕಾರಣಕ್ಕಾಗಿ ಇಬ್ಬರನ್ನು ಹೀಗೆ ಬಂಧಿಸಿದ್ದೀರಿ? ಘಟನೆಯ ನಿಷ್ಪಕ್ಷಪಾತ ತನಿಖೆ ನಡೆಸಿ ಎಂದು ಹೇಳಿರುವುದಾಗಿ ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ.