ಬೀದರ್:ಪೌರತ್ವ ಕಾಯಿದೆ ತಿದ್ದುಪಡಿ ವಿರೋಧಿಸಿ ವಿವಿಧ ಸಂಘಟನೆಗಳು ನಡೆಸುತ್ತಿರುವ ಪ್ರತಿಭಟನೆಗೆ ಶಾಂತಿಯುತವಾಗಿ ಬೆಂಬಲಿಸುವಂತೆ ಕಾಂಗ್ರೆಸ್ ಶಾಸಕ ಹಾಗೂ ಮಾಜಿ ಸಚಿವ ರಹೀಂಖಾನ್ ಮನವಿ ಮಾಡಿದ್ದಾರೆ.
ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಸಂವಿಧಾನ ಉಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಪೌರತ್ವ ಕಾಯಿದೆಯನ್ನ ವಾಪಸ್ ಪಡೆಯುವಂತೆ ಒತ್ತಾಯಿಸಿ ನಡೆಯುತ್ತಿರುವ ಪ್ರತಿಭಟನೆಗೆ ಸಾಥ್ ನೀಡಿ ಎಂದರು.