ಕರ್ನಾಟಕ

karnataka

ETV Bharat / state

ಅಪಘಾತದಲ್ಲಿ ಮೃತಪಟ್ಟಿದ್ದ ಕಾರ್ಯಕರ್ತನ ಕುಟುಂಬಕ್ಕೆ ಪ್ರಭು ಚವ್ಹಾಣ ನೆರವು! - ತುಕಾರಾಮ್ ಬಾಗದೆ

ಅಪಘಾತದಲ್ಲಿ ಮೃತಪಟ್ಟಿದ್ದ ಕಾರ್ಯಕರ್ತನ ಮನೆಗೆ ಭೇಟಿ ನೀಡಿದ ಸಚಿವ ಪ್ರಭು ಚವ್ಹಾಣ ಕುಟುಂಬಸ್ಥರಿಗೆ ಸಾಂತ್ವನ ಹೇಳಿದರು. ಅಲ್ಲದೇ, ವೈಯಕ್ತಿಕವಾಗಿ ಧನ ಸಹಾಯ ಮಾಡಿದರು.

ಪ್ರಭುಚವ್ಹಾಣ
ಪ್ರಭುಚವ್ಹಾಣ

By

Published : Jul 15, 2021, 8:49 AM IST

ಬೀದರ್ :ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದ ಬಿಜೆಪಿ ಕಾರ್ಯಕರ್ತನ ಕುಟುಂಬಕ್ಕೆ ಸಾಂತ್ವನ ಹೇಳಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚವ್ಹಾಣ ವೈಯಕ್ತಿಕವಾಗಿ ಸಹಾಯ ಮಾಡಿದರು.

ಅಪಘಾತದಲ್ಲಿ ಮೃತಪಟ್ಟಿದ್ದ ಕಾರ್ಯಕರ್ತನ ಕುಟುಂಬಕ್ಕೆ ಪ್ರಭುಚವ್ಹಾಣ ನೆರವು!
ಜಿಲ್ಲೆಯ ಕಮಲಾ ನಗರ ತಾಲೂಕಿನ ಸಾವಳಿ ಗ್ರಾಮದ ತುಕಾರಾಮ್ ಬಾಗದೆ (30) ರಸ್ತೆ ಅಪಘಾತದಲ್ಲಿ ಮೃತಪಟ್ಟಿದ್ದರು.ಈ ಹಿನ್ನೆಲೆ ಕುಟುಂಬಸ್ಥರನ್ನು ಭೇಟಿ ಮಾಡಿದ ಸಚಿವ ಪ್ರಭು ಚವ್ಹಾಣ, ನವಜಾತ ಮಗುವನ್ನು ಕಂಡು ಭಾವುಕರಾದರು, ಬಳಿಕ 25 ಸಾವಿರ ರೂಪಾಯಿ ನಗದು ನೀಡಿದರು.

ಮಗುವಿನ ಭವಿಷ್ಯದಲ್ಲಿ ಎಲ್ಲ ರೀತಿಯ ಸಹಕಾರ ಮಾಡುವುದಾಗಿ ಭರವಸೆ ನೀಡಿದರು. ಈ ವೇಳೆ ಕುಟುಂಬಸ್ಥರಿಗೆ ಮಾಸಾಶನ ಸೇರಿದಂತೆ ಇನ್ನಿತರ ಅಗತ್ಯ ಸೌಲಭ್ಯಗಳನ್ನು ಒದಗಿಸಿಕೊಡಬೇಕು ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಇದನ್ನೂ ಓದಿ:ಮುಂಗಾರು ಅಧಿವೇಶನಕ್ಕೂ ಮುನ್ನ ಪ್ರಮುಖ ನಾಯಕರ ಸಭೆ ಕರೆದ ಸಭಾಧ್ಯಕ್ಷ ವೆಂಕಯ್ಯನಾಯ್ಡು

ABOUT THE AUTHOR

...view details