ಬಸವಕಲ್ಯಾಣ: ತಾಲೂಕಿನ ಪರ್ತಾಪೂರ ಗ್ರಾಮದ ವ್ಯಾಪ್ತಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಜಿಂಕೆ ಮರಿಯನ್ನು ರಕ್ಷಿಸುವಲ್ಲಿ ಅರಣ್ಯ ಹಾಗೂ ಅಗ್ನಿಶಾಮಕ ದಳ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಅಪ್ಪಾ ಅಂತೂ ಬದುಕಿದೆ! .. ಬಸವಕಲ್ಯಾಣದಲ್ಲಿ ಬಾವಿಗೆ ಬಿದ್ದ ಜಿಂಕೆ ಮರಿ ರಕ್ಷಣೆ
ಬೀದರ್ ಜಿಲ್ಲೆಯ ಬಸವಕಲ್ಯಾಣ ತಾಲೂಕಿನ ಪರ್ತಾಪೂರ ಗ್ರಾಮದ ವ್ಯಾಪ್ತಿಯಲ್ಲಿ ಆಕಸ್ಮಿಕವಾಗಿ ಬಾವಿಗೆ ಬಿದ್ದ ಜಿಂಕೆ ಮರಿಯನ್ನು ರಕ್ಷಿಸುವಲ್ಲಿ ಅರಣ್ಯ ಹಾಗೂ ಅಗ್ನಿಶಾಮಕ ದಳ ಇಲಾಖೆ ಅಧಿಕಾರಿಗಳು ಯಶಸ್ವಿಯಾಗಿದ್ದಾರೆ.
ಬಸವಕಲ್ಯಾಣದಲ್ಲಿ ಬಾವಿಗೆ ಬಿದ್ದ ಜಿಂಕೆ ಮರಿ ರಕ್ಷಣೆ
ಬಾವಿಯಲ್ಲಿ ಜಿಂಕೆ ಬಿದ್ದಿರುವದನ್ನು ಗಮನಿಸಿದ ಸ್ಥಳೀಯರು ಆರಣ್ಯ ಇಲಾಖೆಗೆ ಸುದ್ದಿ ಮುಟ್ಟಿಸಿದರು. ನಂತರ ಸ್ಥಳಕ್ಕೆ ಆಗಮಿಸಿದ ಅರಣ್ಯ ಇಲಾಖೆ ಅಧಿಕಾರಿ ಹಾಗೂ ಸಿಬ್ಬಂದಿ ಜಿಂಕೆ ರಕ್ಷಣೆಗೆ ಮುಂದಾಗಿದ್ದರು. ಆದರೆ ಅರಣ್ಯ ಇಲಾಖೆ ಸಿಬ್ಬಂದಿ ಪ್ರಯತ್ನ ಫಲ ನೀಡಲಿಲ್ಲ. ನಂತರ ಸ್ಥಳಕ್ಕೆ ಆಗಮಿಸಿದ ಅಗ್ನಿ ಶಾಮಕ ಸಿಬ್ಬಂದಿ ಬಾವಿಗೆ ಬಿದ್ದ ಜಿಂಕೆ ಮೇಲೆತ್ತಿದ್ದಾರೆ.
ಬಾವಿಗೆ ಬಿದ್ದ ರಭಸಕ್ಕೆ ಜಿಂಕೆ ಕಾಲಿಗೆ ಗಾಯವಾಗಿದ್ದರಿಂದ ಪಶುವೈದ್ಯರಿಂದ ಚಿಕಿತ್ಸೆ ಕೊಡಿಸಿ ನಂತರ ಜಿಂಕೆಯನ್ನು ಅರಣ್ಯ ಪ್ರದೇಶಕ್ಕೆ ಬಿಡಲಾಗಿದೆ.