ಬೀದರ್: ಸತತ ಮಳೆಯಿಂದಾಗಿ ಜಿಲ್ಲೆಯಾದ್ಯಂತ ರೈತರ ಮುಂಗಾರು ಹಂಗಾಮಿನ ಬೆಳೆಗಳು ನೀರು ಪಾಲಾಗಿದ್ದು ಸಂಕಷ್ಟದಲ್ಲಿರುವ ರೈತರಿಗೆ ಸರ್ಕಾರ ಪ್ರತಿ ಎಕರೆಗೆ 25 ಸಾವಿರ ರೂ. ಪರಿಹಾರ ಧನ ನೀಡಬೇಕು ಎಂದು ಕೆಪಸಿಸಿ ಕಾರ್ಯಾಧ್ಯಕ್ಷ ಈಶ್ವರ್ ಖಂಡ್ರೆ ಒತ್ತಾಯಿಸಿದರು.
ಅತಿವೃಷ್ಠಿ ಪೀಡಿತ ಪ್ರದೇಶಗಳಲ್ಲಿ ಪರಿವೀಕ್ಷಣೆ ನಡೆಸಿದ ಈಶ್ವರ್ ಖಂಡ್ರೆ ಜಿಲ್ಲೆಯ ಭಾಲ್ಕಿ ತಾಲೂಕಿನ ಅತಿವೃಷ್ಠಿ ಪೀಡಿತ ಪ್ರದೇಶಗಳಲ್ಲಿ ಪರಿವೀಕ್ಷಣೆ ನಡೆಸಿದ ಅವರು, ರೈತರ ಬೆಳೆಗಳ ಹಾನಿ ನೋಡಿ ಸರ್ಕಾರ ತಕ್ಷಣ ಪರಿಹಾರ ಬಿಡುಗಡೆ ಮಾಡಬೇಕು. ಸಂಕಷ್ಟದಲ್ಲಿರುವ ರೈತರ ಸಹಾಯಕ್ಕೆ ಬರಬೇಕು ಎಂದರು.
ಜಿಲ್ಲೆಯಲ್ಲಾದ ಮಹಾಮಳೆಗೆ 1 ಲಕ್ಷ ಹೇಕ್ಟರ್ ಪ್ರದೇಶದಲ್ಲಿ ಬೆಳೆಯಲಾಗಿದ್ದ ಉದ್ದು, ಹೆಸರು, ಸೋಯಾಬಿನ್, ತೊಗರಿ, ಕಬ್ಬು, ತೋಟಗಾರಿಕೆ ಬೆಳೆಗಳು ಹಾನಿಗೀಡಾಗಿವೆ. ಜಿಲ್ಲೆಗೆ ತಕ್ಷಣ 100 ಕೋಟಿ ರೂ. ಅನುದಾನ ಬಿಡುಗಡೆ ಮಾಡಬೇಕು ಎಂದು ಒತ್ತಾಯಿಸಿದರು.
ಮಳೆಯಿಂದ ಕೊಚ್ಚಿಹೋದ ಬ್ಯಾಲಹಳ್ಳಿ ಗ್ರಾಮದ ವೃದ್ಧ ಹಾಗೂ ಸಿಡಿಲು ಬಡಿದು ಸಾವನಪ್ಪಿದ್ದ ಅರ್ಜುನ್ ಎಂಬಾತರ ಕುಟುಂಬಸ್ಥರಿಗೆ ತಲಾ 5 ಲಕ್ಷ ರೂ.ಪರಿಹಾರ ಚೆಕ್ ವಿತರಿಸಿದರು.