ಕರ್ನಾಟಕ

karnataka

ETV Bharat / state

ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಲು ಒತ್ತಾಯ

ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕಲ್ಪಿಸಬೇಕು ಎಂದು ತಾಲೂಕಿನ ಖಂಡಿಕೇರಿವಾಡಿ ಗ್ರಾಮಸ್ಥರು ಒತ್ತಾಯಿಸಿ ಜಿಲ್ಲಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.

ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಲು ಖಂಡಿಕೇರಿವಾಡಿ ಗ್ರಾಮಸ್ಥರ ಒತ್ತಾಯ
ಜನಸಂಖ್ಯೆ ಆಧಾರದಲ್ಲಿ ಮೀಸಲಾತಿ ಕಲ್ಪಿಸಲು ಖಂಡಿಕೇರಿವಾಡಿ ಗ್ರಾಮಸ್ಥರ ಒತ್ತಾಯ

By

Published : Aug 26, 2020, 11:47 PM IST

ಬಸವಕಲ್ಯಾಣ (ಬೀದರ್​): ಮುಂಬರುವ ಗ್ರಾಮ ಪಂಚಾಯಿತಿ ಚುನಾವಣೆಯಲ್ಲಿ ಜನಸಂಖ್ಯೆ ಆಧಾರದ ಮೇಲೆ ಮೀಸಲಾತಿ ಕಲ್ಪಿಸಬೇಕು ಎಂದು ತಾಲೂಕಿನ ಖಂಡಿಕೇರಿ ವಾಡಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ಈ ಸಂಬಂಧ ಗ್ರಾಮಸ್ಥರ ನಿಯೋಗ ಇಲ್ಲಿಯ ಮಿನಿ ವಿಧಾನಸೌಧಕ್ಕೆ ತೆರಳಿ ಬೇಡಿಕೆ ಕುರಿತು ಜಿಲ್ಲಾಧಿಕಾರಿಗಳಿಗೆ ಮನವಿ ಪತ್ರವನ್ನು ಉಪ ತಹಶೀಲ್ದಾರ್​​ ಶಿವಾನಂದ ಮೇತ್ರೆ ಅವರ ಮೂಲಕ ಸಲ್ಲಿಸಿದ್ದಾರೆ.

ಗ್ರಾಪಂ ಚುನಾವಣೆ ಸಂಬಂಧ ಸರ್ಕಾರದಿಂದ ಈಗಾಗಲೇ ಹೊರಡಿಸಲಾದ ನೋಟಿಫಿಕೇಶನ್ ಪ್ರಕಾರ ಗ್ರಾಮದಲ್ಲಿ ಎರಡು ಸ್ಥಾನಗಳು ಪರಿಶಿಷ್ಟ ಪಂಗಡಕ್ಕೆ ಹಾಗೂ ಒಂದು ಸ್ಥಾನ ಸಾಮಾನ್ಯ ವರ್ಗಕ್ಕೆ ಮೀಸಲು ಇರಿಸಲಾಗಿದೆ ಎಂದು ತಿಳಿದು ಬರುತ್ತಿದೆ. ಆದರೆ 2011ರ ಜನಗಣತಿ ಪ್ರಕಾರ ಪರಿಶಿಷ್ಟ ಜಾತಿ ಜನರು ಹೆಚ್ಚಾಗಿದ್ದು, ಜನಸಂಖ್ಯೆ ಆಧಾರದಲ್ಲಿ ಪರಿಶಿಷ್ಟ ಜಾತಿಗೆ ಒಂದು ಸ್ಥಾನ, ಪರಿಶಿಷ್ಟ ಪಂಗಡಕ್ಕೆ ಒಂದು ಸ್ಥಾನ ಹಾಗೂ ಸಾಮಾನ್ಯ ವರ್ಗಕ್ಕೆ ಒಂದು ಸ್ಥಾನ ಮೀಸಲಿರಿಸಿ ಆದೇಶ ಹೊರಡಿಸಬೇಕು ಎಂದು ಪತ್ರದಲ್ಲಿ ಗ್ರಾಮಸ್ಥರು ಒತ್ತಾಯಿಸಿದ್ದಾರೆ.

ABOUT THE AUTHOR

...view details