ಕರ್ನಾಟಕ

karnataka

ETV Bharat / state

ಬೈಕ್​ ಸವಾರನ ಅಚಾತುರ್ಯ, ರಸ್ತೆ ದಾಟುತ್ತಿದ್ದ ಮಹಿಳೆಗೆ ಢಿಕ್ಕಿ ; ದೃಶ್ಯ ಸಿಸಿ ಟಿವಿಯಲ್ಲಿ ಸೆರೆ - CCTV Camera

ವೃತ್ತದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಮಹಿಳೆಯು ತನ್ನ ಎಚ್ಚರಿಕೆಯಲ್ಲಿ ಅತ್ತ-ಇತ್ತ ನೋಡಿ ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್​ ಸವಾರ ಇದ್ದಕ್ಕಿದ್ದಂತೆ ಮಹಿಳೆಗೆ ಢಿಕ್ಕಿ ಹೊಡೆದಿದ್ದಾನೆ..

Road Accident Captured On A CCTV Camera In Bidar
ಸಿಸಿಟಿವಿಯಲ್ಲಿ ಸೆರೆಯಾದ ಅಪಘಾತದ ದೃಶ್ಯ

By

Published : Sep 23, 2020, 4:10 PM IST

ಬೀದರ್ :ಅತೀ ವೇಗವಾಗಿ ಬಂದ ಬೈಕ್​ ಸವಾರ ನೋಡು ನೋಡುತ್ತಲೇ ರಸ್ತೆ ದಾಟುತ್ತಿದ್ದ ಮಹಿಳೆಯೊಬ್ಬರಿಗೆಢಿಕ್ಕಿ ಹೊಡೆದಿರುವ ಘಟನೆ ಜಿಲ್ಲೆಯ ಭಾಲ್ಕಿ ಪಟ್ಟಣದಲ್ಲಿ ನಡೆದಿದೆ. ಡಿಕ್ಕಿ ಹೊಡೆದ ದೃಶ್ಯ ಸಿಸಿ ಟಿವಿಯಲ್ಲಿ ಸೆರೆಯಾಗಿದೆ.

ಸಿಸಿ ಟಿವಿಯಲ್ಲಿ ಸೆರೆಯಾದ ಅಪಘಾತದ ದೃಶ್ಯ

ಭಾಲ್ಕಿ ಪಟ್ಟಣದ ಬಸವೇಶ್ವರ ವೃತ್ತದಲ್ಲಿ ಈ ಘಟನೆ ನಡೆದಿದೆ. ವೃತ್ತದಲ್ಲಿ ವಾಹನ ದಟ್ಟಣೆ ಹೆಚ್ಚಾಗಿದ್ದರಿಂದ ಮಹಿಳೆಯು ತನ್ನ ಎಚ್ಚರಿಕೆಯಲ್ಲಿ ಅತ್ತ-ಇತ್ತ ನೋಡಿ ರಸ್ತೆ ದಾಟುತ್ತಿದ್ದರು. ಈ ವೇಳೆ ವೇಗವಾಗಿ ಬಂದ ಬೈಕ್​ ಸವಾರ ಇದ್ದಕ್ಕಿದ್ದಂತೆ ಮಹಿಳೆಗೆ ಢಿಕ್ಕಿ ಹೊಡೆದಿದ್ದಾನೆ. ಅಪಘಾತದ ದೃಶ್ಯ ವೃತ್ತದಲ್ಲಿನ ಸಿಸಿ ಟಿವಿಯಲ್ಲಿ ಸೆರೆಯಾಗಿದೆ. ಘಟನೆಯಿಂದ ಗಾಯಗೊಂಡ ಮಹಿಳೆಯನ್ನು ಸ್ಥಳೀಯರು ಸ್ಪತ್ರೆಗೆ ದಾಖಲಿಸಿದ್ದಾರೆ. ಘಟನೆಯ ವಿಡಿಯೋ ವೈರಲ್ ಆಗಿದೆ.

ಸಿಸಿ ಟಿವಿಯಲ್ಲಿ ಸೆರೆಯಾದ ಅಪಘಾತದ ದೃಶ್ಯ

ABOUT THE AUTHOR

...view details