ಬೀದರ್:ದೇಶಾದ್ಯಂತ ಪೌರತ್ವ ಕಾಯ್ದೆ ವಿರೋಧಿಸಿ ನಡೆಯುತ್ತಿರುವ ಪ್ರತಿಭಟನೆ ವೇಳೆ ಹಿಂಸಾಚಾರದಲ್ಲಿ ಸಾರ್ವಜನಿಕ ಶಾಂತಿ ಭಂಗವಾಗುತ್ತಿರುವ ಹಿನ್ನಲೆಯಲ್ಲಿ ಗಡಿ ಜಿಲ್ಲೆಯಲ್ಲಿ ಎಚ್ಚೆತ್ತುಕೊಂಡ ಪೊಲೀಸರು ರೂಟ್ ಮಾರ್ಚ್ ನಡೆಸಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸಿದರು.
ಬೀದರ್ನಲ್ಲಿ ಜಿಲ್ಲಾ ಪೊಲೀಸರಿಂದ ರೂಟ್ ಮಾರ್ಚ್... ಸಾರ್ವಜನಿಕರಿಗೆ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಜಾಗೃತಿ - ಬೀದರ್ ರೂಟ್ ಮಾರ್ಚ್ ಸುದ್ದಿ
ಬೀದರ್ನಲ್ಲಿ ಪೊಲೀಸರು ರೂಟ್ ಮಾರ್ಚ್ ನಡೆಸಿ ಸಾರ್ವಜನಿಕರಿಗೆ ಪೌರತ್ವ ತಿದ್ದುಪಡಿ ಮಸೂದೆ ಕುರಿತು ಜಾಗೃತಿ ಮೂಡಿಸಿದ್ರು.
ರೂಟ್ ಮಾರ್ಚ್
ನಗರದ ಗವಾನ್ ಚೌಕ್ನಿಂದ, ಚೌಬಾರಾ ಮೂಲಕ ಅಂಬೇಡ್ಕರ್ ವೃತ್ತದಿಂದ ನಯಾಕಮಾನ್ ಸೇರಿದಂತೆ ನಗರದ ಪ್ರಮುಖ ಬಡಾವಣೆಗಳಲ್ಲಿ ಪೊಲೀಸರಿಂದ ರೂಟ್ ಮಾರ್ಚ್ ನಡೆಯಿತು. ಜಿಲ್ಲಾ ಸಶಸ್ತ್ರ ಮೀಸಲು ಪಡೆ, ಕೆಎಸ್ಆರ್ಪಿ, ಸೇರಿದಂತೆ ಸಾವಿರಕ್ಕೂ ಅಧಿಕ ಪೊಲೀಸರ ರೂಟ್ ಮಾರ್ಚ್ ಗಮನ ಸೆಳೆಯಿತು.
ಜಿಲ್ಲೆಯಲ್ಲಿ ಪೌರತ್ವ ತಿದ್ದುಪಡಿ ಕಾಯ್ದೆ ವಿರೋಧಿಸಿ ಪ್ರತಿಭಟನೆ ಮಾಡಲಾಗ್ತಿದೆ. ಈಗಾಗಲೇ ಜಿಲ್ಲಾಡಳಿತ ಶಾಂತಿಯುತ ಮನವಿ ಸಲ್ಲಿಕೆಗೆ ಮಾತ್ರ ಅವಕಾಶ ಮಾಡಿಕೊಟ್ಟಿದೆ. ಆದರು ಮುನ್ನೆಚ್ಚರಿಕೆ ಕ್ರಮವಾಗಿ ನಗರದಲ್ಲಿ ಬಿಗಿ ಪೊಲೀಸ್ ಬಂದೋಬಸ್ತ್ ಕೈಗೊಂಡಿದ್ದಲ್ಲದೆ, ಸಾರ್ವಜನಿಕ ಜಾಗೃತಿ ಕೂಡ ಮೂಡಿಸಲಾಗಿದೆ.