ಬೀದರ್:ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ವೊಂದು ರಸ್ತೆಯಲ್ಲಿ ಅಡ್ಡಾದಿಡ್ಡಿ ಚಲಿಸಿದ್ದರಿಂದ ಸರಣಿ ರಸ್ತೆ ಅಪಘಾತ ಸಂಭವಿಸಿ ಆರು ಜನರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಜಿಲ್ಲೆಯ ಔರಾದ್ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ನಡೆದಿದೆ.
ಚಾಲಕನ ನಿಯಂತ್ರಣ ತಪ್ಪಿ ಸರಣಿ ಅಪಘಾತ : 6 ಜನರಿಗೆ ಗಂಭೀರ ಗಾಯ - ಬೀದರ್ನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಅರಣಿ ಅಪಘಾತ
ಬೀದರ್ ಜಿಲ್ಲೆಯ ಔರಾದ್ ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ಸರಣಿ ಅಪಘಾತ ಸಂಭವಿಸಿದೆ. ಅಪಘಾತದಲ್ಲಿ ಆರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ.
Series accident in Bida
ಪಟ್ಟಣದ ಎಪಿಎಂಸಿ ಮಾರುಕಟ್ಟೆ ಬಳಿ ಬೀದರ್-ನಾಂದೇಡ್ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದ್ದು, ಬೀದರ್ ಮಾರ್ಗದಿಂದ ವೇಗವಾಗಿ ಬಂದ ಟಿಪ್ಪರ್ ಬ್ರೇಕ್ ಫೇಲ್ ಆಗಿ ರಸ್ತೆ ಬದಿಯಲ್ಲಿ ನಿಂತಿದ್ದ ಎರಡು ದ್ವಿಚಕ್ರ ವಾಹನ, ಒಂದು ಕ್ರೂಜರ್ ವಾಹನಕ್ಕೆ ಡಿಕ್ಕಿ ಹೊಡೆದು, ನಂತರ ವಿದ್ಯುತ್ ಕಂಬಕ್ಕೆ ಹಾಯ್ದು ಕೊನೆಗೆ ಅಂಗಡಿಯೊಂದರಲ್ಲಿ ನುಗ್ಗಿದೆ.
ಘಟನೆಯಲ್ಲಿ ಆರು ಜನರು ಗಾಯಗೊಂಡಿದ್ದು,ಅವರಿಗೆ ಸ್ಥಳೀಯ ಆಸ್ಪತ್ರೆಯಲ್ಲಿ ಪ್ರಾಥಮಿಕ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜಿಲ್ಲಾಸ್ಪತ್ರೆಗೆ ಸಾಗಿಸಲಾಗಿದೆ. ಈ ಕುರಿತು ಔರಾದ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
Last Updated : Jan 1, 2021, 3:49 PM IST