ಕರ್ನಾಟಕ

karnataka

ETV Bharat / state

ವಿಷಪೂರಿತ ಹಾವು ಕಚ್ಚಿ ರೈತ ಸಾವು - Farmer's death by snake bite in Bidar

ವಿಷಪೂರಿತ ಹಾವು ಕಚ್ಚಿ ಚಿಕಿತ್ಸೆ ಫಲಕಾರಿಯಾಗದೆ ರೈತನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ನಡೆದಿದೆ.

Farmer death  in Bidar
ರಾಜಕುಮಾರ ಬಾಬುರಾವ್ ಮೃತ  ರೈತ

By

Published : Jan 19, 2020, 8:07 PM IST

ಬೀದರ್: ವಿಷಪೂರಿತ ಹಾವು ಕಚ್ಚಿದ ಪರಿಣಾಮ ಚಿಕಿತ್ಸೆ ಫಲಕಾರಿಯಾಗದೆ ರೈತನೋರ್ವ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಔರಾದ್ ತಾಲೂಕಿನ ಕೌಡಗಾಂವ್ ಗ್ರಾಮದಲ್ಲಿ ನಡೆದಿದೆ.

ರಾಜಕುಮಾರ ಬಾಬುರಾವ್(40) ಮೃತ ರೈತ. ಹತ್ತು ದಿನಗಳ ಹಿಂದೆ ಹೊಲದಲ್ಲಿ ಕೆಲಸ ಮಾಡುತ್ತಿದ್ದಾಗ ಹಾವು ಕಚ್ಚಿದ್ದರಿಂದ ಅಸ್ವಸ್ಥಗೊಂಡಿದ್ದ ರೈತನಿಗೆ ತೆಲಂಗಾಣದ ಹೈದ್ರಾಬಾದ್ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗಿತ್ತು. ಅಲ್ಲಿನ ಆಸ್ಪತ್ರೆಯಲ್ಲಿ ಖರ್ಚು ಹೆಚ್ಚಾಗಿದ್ದಕ್ಕೆ ಮೂರು ದಿನಗಳ ಹಿಂದೆ ಬೀದರ್ ಬ್ರಿಮ್ಸ್ ಆಸ್ಪತ್ರೆಗೆ ಕರೆತರಲಾಗಿತ್ತು. ಈ ವೇಳೆ ಚಿಕಿತ್ಸೆ ಫಲಕಾರಿಯಾಗದೆ ರೈತ ಸಾವನ್ನಪ್ಪಿದ್ದಾನೆ.

ಈ ಕುರಿತು ಸಂತಪೂರ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details