ಕರ್ನಾಟಕ

karnataka

ETV Bharat / state

ರೈತರ ಸಮಸ್ಯೆ ಚರ್ಚೆಗಾಗಿ ವಿಶೇಷ ಅಧಿವೇಶನ ಕರೆಯಬೇಕು: ವಿಪಕ್ಷ ನಾಯಕ ಸಿದ್ದು ಒತ್ತಾಯ - ಅತಿವೃಷ್ಟಿ ಹಾನಿ ವೀಕ್ಷಣೆ ಮಾಡಿದ ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ

ಬಿಜೆಪಿ ಸರ್ಕಾರ ಕಣ್ಣು, ಕಿವಿ, ಮೂಗು, ಬಾಯಿ ಸೇರಿದಂತೆ ಪಂಚೇಂದ್ರಿಗಳನ್ನು ಕಳೆದುಕೊಂಡಿದೆ. ಸುಳ್ಳೇ ಇವರ ಮನೆ ದೇವರಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು. ಮುಖ್ಯಮಂತ್ರಿಗಳು ಕೇವಲ ವೈಮಾನಿಕ ಸಮೀಕ್ಷೆ ನಡೆಸಿ ತೆರಳಿದ್ದಾರೆ ಎಂದು ಸಿದ್ಧರಾಮಯ್ಯ ಬಿಜೆಪಿ ಸರ್ಕಾರದ ಕುರಿತು ವಾಗ್ದಾಳಿ ನಡೆಸಿದರು. .

Opposition leader Siddaramaiah
ವಿಪಕ್ಷ ನಾಯಕ ಸಿದ್ಧರಾಮಯ್ಯ

By

Published : Oct 25, 2020, 10:27 PM IST

ಬಸವಕಲ್ಯಾಣ:ರಾಜ್ಯದಲ್ಲಿ ಅತಿವೃಷ್ಟಿಯಿಂದ ಅಪಾರ ಪ್ರಮಾಣದಲ್ಲಿ ಬೆಳೆ ಹಾನಿಯಾಗಿದ್ದು, ರೈತರ ಸಮಸ್ಯೆ ಕುರಿತು ಚರ್ಚಿಸಿ ಪರಿಹಾರ ಕಲ್ಪಿಸಲು ಕೂಡಲೇ ವಿಧಾನಸಭೆ ವಿಶೇಷ ಅಧಿವೇಶನ ಕರೆಯಬೇಕು ಎಂದು ವಿಧಾನಸಭೆ ವಿಪಕ್ಷ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಒತ್ತಾಯಿಸಿದರು.

ತಾಲೂಕಿನ ವಿವಿಧಡೆ ಅತಿವೃಷ್ಟಿ ಹಾನಿ ವೀಕ್ಷಣೆ ನಡೆಸಿದ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಹಸಿರು ಶಾಲು ಹಾಕಿಕೊಂಡು ಪ್ರಮಾಣ ವಚನ ಸ್ವೀಕರಿಸಿದರೆ ಸಾಲದು. ತಕ್ಷಣ ವಿಧಾನಸಭೆ ಜಂಟಿ ಅಧಿವೇಶನ ನಡೆಸಿ, ರೈತರಿಗೆ ಸೂಕ್ತ ಪರಿಹಾರ ಕಲ್ಪಿಸಲು ಸರ್ಕಾರ ಮುಂದಾಗಬೇಕು ಎಂದು ಒತ್ತಾಯಿಸಿದರು.

ರಾಜ್ಯದಲ್ಲಿ ಸಂಭವಿಸಿದ ಅತಿವೃಷ್ಟಿಯಿಂದಾಗಿ ರೈತರು ಸಂಪೂರ್ಣ ಬೆಳೆ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದ್ದಾರೆ. ಆದರೆ ಕಷ್ಟದಲ್ಲಿರುವ ರೈತರ ನೆರವಿಗೆ ಬರಬೇಕಿದ್ದ ಸರ್ಕಾರ ನಯಾ ಪೈಸೆ ಪರಿಹಾರ ಧನ ಬಿಡುಗಡೆ ಮಾಡದೆ ನಿರ್ಲಕ್ಷ ವಹಿಸಿದೆ. ಹಿಂದಿನ ವರ್ಷ ರಾಜ್ಯದಲ್ಲಿ ಅತಿವೃಷ್ಟಿಯಿಂದಾಗಿ ನೆರೆ ಹಾವಳಿ ಸಂಭವಿಸಿ ಅಪಾರ ಪ್ರಮಾಣದಲ್ಲಿ ಹಾನಿಯಾಗಿತ್ತು. ಆದರೆ ಸರ್ಕಾರದಿಂದ ಇದುವರೆಗೂ ಪರಿಹಾರ ಕಲ್ಪಿಸಲಾಗಿಲ್ಲ. ಬಿಜೆಪಿ ಸರ್ಕಾರ ಕಣ್ಣು, ಕಿವಿ, ಮೂಗು, ಬಾಯಿ ಸೇರಿದಂತೆ ಪಂಚೇಂದ್ರಿಗಳನ್ನು ಕಳೆದುಕೊಂಡಿದೆ. ಸುಳ್ಳೇ ಇವರ ಮನೆ ದೇವರಾಗಿದೆ ಎಂದು ಸರ್ಕಾರದ ವಿರುದ್ಧ ಹರಿಹಾಯ್ದರು. ಮುಖ್ಯಮಂತ್ರಿಗಳು ಕೇವಲ ವೈಮಾನಿಕ ಸಮೀಕ್ಷೆ ನಡೆಸಿ ತೆರಳಿದ್ದಾರೆ. ಕಂದಾಯ ಮಂತ್ರಿಗಳು ಕಾಟಾಚಾರಕ್ಕೆ ಬಂದು ಹೋಗಿದ್ದಾರೆ.

ಬೀದರ್ ಜಿಲ್ಲೆಯಲ್ಲಿ 2 ಲಕ್ಷ 50 ಸಾವಿರ ಹೆಕ್ಟೇರ್​ ಬೆಳೆಹಾನಿಯಾಗಿದೆ. ಪ್ರತಿ ಎಕರೆಗೆ 20 ಸಾವಿರ ರೂನಂತೆ 1,500 ಕೋಟಿ ರೂ ಮೌಲ್ಯದ ಬೆಳೆಯೂ ನಷ್ಟವಾಗಿದೆ. ಪ್ರವಾಹದಿಂದ 9 ಜನರು ಮೃತಪಟ್ಟಿದ್ದು, 1,700 ಮನೆಗಳು ಕುಸಿದು ಬಿದ್ದಿವೆ. ಕೆಲವು ಕಡೆ ಬೆಳೆಹಾನಿ ಸರ್ವೆ ಮಾಡಿದ್ದಾರೆ. ಇನ್ನು ಕೆಲವು ಕಡೆ, ಸಮೀಕ್ಷೆಯೇ ಮಾಡಿಲ್ಲ. ಸರ್ಕಾರದಿಂದ ಇದುವರೆಗೆ 1 ನಯಾ ಪೈಸೆ ಪರಿಹಾರ ಹಣ ಬಿಡುಗಡೆ ಮಾಡಿಲ್ಲ ಎಂದು ಆರೋಪಿಸಿದ ಅವರು, ಕೇವಲ ಜಿಲ್ಲಾ ಮಟ್ಟದ ಅಧಿಕಾರಿಗಳು ಕೊಟ್ಟ ಮಾಹಿತಿಯನ್ನು ಪಡೆದುಕೊಂಡು ಹೋದರೆ ಸಾಲದು, ರೈತರ ಜಮೀನುಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವಿಕ್ಷಿಸಬೇಕು ಎಂದು ಸಲಹೆ ನೀಡಿದರು.

ಬೀದರ, ಕಲಬುರ್ಗಿ, ವಿಜಯಪುರ, ಬೆಳಗಾವಿ ಜಿಲ್ಲೆಗಳಲ್ಲಿ ಬೆಳೆ ಹಾನಿ ಸಮೀಕ್ಷೆ ಮಾಡಿದ ನಂತರ ಬೆಳೆ ಹಾನಿ ಕುರಿತು ವಾಸ್ತವಾಂಶದ ವರದಿ ಸಿದ್ಧಪಡಿಸಿ ಸರ್ಕಾರಕ್ಕೆ ಸಲ್ಲಿಸುವ ಜೊತೆಗೆ ರೈತರಿಗೆ ತಕ್ಷಣ ಪರಿಹಾರ ಕಲ್ಪಿಸುವಂತೆ ಸರ್ಕಾರದ ಮೇಲೆ ಒತ್ತಡ ಹೇರುವುದಾಗಿ ತಿಳಿಸಿದರು.

ABOUT THE AUTHOR

...view details