ಕರ್ನಾಟಕ

karnataka

ETV Bharat / state

ವಿದ್ಯಾರ್ಥಿನಿ ಸಾವು ಪ್ರಕರಣ, ಆರೋಪಿ ವಿರುದ್ಧ ಕಠಿಣ ಕ್ರಮ: ಎಂ.ಬಿ ಪಾಟೀಲ್ - undefined

ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯ ಸಾವು ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿ ಎಷ್ಟೇ ಪ್ರಭಾವಿಯಾಗಿದ್ದರೂ ಮುಲಾಜಿಲ್ಲದೆೇ ಕಠಿಣ ಕ್ರಮ ಕೈಗೊಳ್ಳಲಾಗುವುದು ಎಂದು ಗೃಹ ಸಚಿವರು ಹೇಳಿದ್ದಾರೆ.

ಎಂ.ಬಿ ಪಾಟೀಲ್

By

Published : Apr 20, 2019, 4:51 PM IST

Updated : Apr 20, 2019, 5:29 PM IST

ಬೀದರ್: ರಾಯಚೂರಿನ ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿ ಪ್ರಕರಣವನ್ನು ಸರ್ಕಾರ ಗಂಭೀರವಾಗಿ ಪರಿಗಣಿಸಿದೆ. ಆರೋಪಿ ಯಾರೇ ಆಗಿದ್ದರೂ ಕ್ರಮ ಖಂಡಿತ ಎಂದು ಗೃಹ ಸಚಿವ ಎಂ.ಬಿ.ಪಾಟೀಲ್ ಹೇಳಿದ್ದಾರೆ.

ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ಸುದ್ದಿಗೊಷ್ಠಿ

ನಗರದಲ್ಲಿ ಲೋಕಸಭೆ ಚುನಾವಣೆ ಪ್ರಚಾರ ನಿಮಿತ್ತ ಸುದ್ದಿಗೊಷ್ಠಿಯಲ್ಲಿ ಮಾತನಾಡಿದ ಅವರು, ವಿದ್ಯಾರ್ಥಿನಿ ಸಾವಿನ ತನಿಖೆಯಲ್ಲಿ ಯಾವುದೇ ಲೋಪ ಆಗಬಾರದು ಎಂದು ಡಿಜಿ, ಐಜಿಪಿ ಅವರಿಗೆ ಸೂಚನೆ ನೀಡಿದ್ದೇನೆ. ಅಲ್ಲದೆ ಪ್ರಕರಣದ ಬಗ್ಗೆ ಖುದ್ದಾಗಿ ಮಾತನಾಡಿದ್ದೇನೆ. ಆರೋಪಿ ಎಷ್ಟೇ ಪ್ರಭಾವಿಯಾಗಿದ್ದರೂ ಮುಲಾಜಿಲ್ಲದೆ ಕ್ರಮ ಕೈಗೊಳ್ಳಲಾಗುವುದು ಎಂದು ಹೇಳಿದರು.

ಸಹಕಾರ ಸಚಿವ ಬಂಡೆಪ್ಪ ಕಾಶೆಂಪೂರ್, ಗಣಿ ಮತ್ತು ಭೂ ವಿಜ್ಞಾನ ಸಚಿವ ರಾಜಶೇಖರ್ ಪಾಟೀಲ್, ಕ್ರೀಡಾ ಸಚಿವ ರಹಿಂಖಾನ್ ಸೇರಿದಂತೆ ಹಲವು ನಾಯಕರು ಉಪಸ್ಥಿತರಿದ್ದರು.

Last Updated : Apr 20, 2019, 5:29 PM IST

For All Latest Updates

TAGGED:

ABOUT THE AUTHOR

...view details