ಬೀದರ್: ಬೀದರ್ ಹೊರ ವಲಯದ ಕೊಳಾರ ಗ್ರಾಮದ ಶ್ರಮಜೀವಿ ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸಾವಿಗೀಡಾದ ವಿದ್ಯಾರ್ಥಿನಿ ಸುಪ್ರಿಯಾ ರಾಠೋಡ್ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಎಬಿವಿಪಿ ಹಾಗೂ ಬಂಜಾರ ಕ್ರಾಂತಿ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ವಿದ್ಯಾರ್ಥಿನಿ ರಾಠೋಡ್ ಸಾವಿನ ಸಮಗ್ರ ತನಿಖೆಗೆ ಒತ್ತಾಯಿಸಿ ಪ್ರತಿಭಟನೆ - protest at bidar
ಬೀದರ್ ಹೊರ ವಲಯದ ಕೊಳಾರ ಗ್ರಾಮದ ಶ್ರಮಜೀವಿ ವಸತಿ ಶಾಲೆಯಲ್ಲಿ ಆತ್ಮಹತ್ಯೆ ಮಾಡಿಕೊಂಡ ಸ್ಥಿತಿಯಲ್ಲಿ ಸಾವಿಗೀಡಾದ ವಿದ್ಯಾರ್ಥಿನಿ ಸುಪ್ರಿಯಾ ರಾಠೋಡ್ ಪ್ರಕರಣದ ಉನ್ನತ ಮಟ್ಟದ ತನಿಖೆಗೆ ಆಗ್ರಹಿಸಿ ಎಬಿವಿಪಿ ಹಾಗೂ ಬಂಜಾರ ಕ್ರಾಂತಿ ದಳ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
student-supriya-rathores-death-protes
ಜಿಲ್ಲೆಯ ಔರಾದ್ ಪಟ್ಟಣದ ಎಪಿಎಂಸಿ ವೃತ್ತದಿಂದ ಬಸವೇಶ್ವರ ವೃತ್ತದ ಮೂಲಕ ತಹಸೀಲ್ ಕಚೇರಿವರೆಗೆ ನಡೆಸಿದ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿನಿ ಸುಪ್ರಿಯಾ ರಾಠೋಡ್ ಸಾವಿಗೆ ಕಾರಣರಾದ ಶಾಲಾ ಆಡಳಿತ ಮಂಡಳಿ ಹಾಗೂ ಶಿಕ್ಷಕರನ್ನು ಕೂಡಲೆ ಬಂಧಿಸಬೇಕು. ಈ ಸಂಬಂಧ ಮೃತ ಸುಪ್ರಿಯಾ ಪೋಷಕರು ನೀಡಿರುವ ದೂರಿನ ಆಧಾರದಲ್ಲಿ ಸಮಗ್ರ ತನಿಖೆ ನಡೆಸಬೇಕು ಎಂದು ಒತ್ತಾಯಿಸಿದರು.