ಬಸವಕಲ್ಯಾಣ (ಬೀದರ್):ತೆಲಂಗಾಣದ ಹೈದ್ರಾಬಾದ್ನಲ್ಲಿ ನಡೆದ ಪಶು ವೈದ್ಯೆ ಹಾಗೂ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ಅಪ್ರಾಪ್ತ ಬಾಲಕಿ ಮೇಲೆ ನಡೆದ ಅತ್ಯಾಚಾರ, ಕೊಲೆ ಖಂಡಿಸಿ ನಗರದ ನೀಲಾಂಬಿಕಾ ಮಹಿಳಾ ಶಾಲಾ, ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಅತ್ಯಾಚಾರ ಖಂಡಿಸಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ - basavakalyana students protest against rape case
ಹೈದ್ರಾಬಾದ್ನ ಪಶು ವೈದ್ಯೆ ಹಾಗೂ ಕಲಬುರಗಿ ಜಿಲ್ಲೆಯ ಚಿಂಚೋಳಿ ತಾಲೂಕಿನಲ್ಲಿ ನಡೆದ ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ, ಕೊಲೆ ಖಂಡಿಸಿ ಬಸವಕಲ್ಯಾಣದ ನೀಲಾಂಬಿಕಾ ಮಹಿಳಾ ಶಾಲಾ-ಕಾಲೇಜಿನ ವಿದ್ಯಾರ್ಥಿನಿಯರು ಪ್ರತಿಭಟನೆ ನಡೆಸಿದರು.
ಅತ್ಯಾಚಾರ ಖಂಡಿಸಿ ವಿದ್ಯಾರ್ಥಿನಿಯರಿಂದ ಪ್ರತಿಭಟನೆ
ಬಸವಕಲ್ಯಾಣದ ನೀಲಾಂಬಿಕಾ ಮಹಿಳಾ ಶಾಲಾ-ಕಾಲೇಜಿನ ವಿದ್ಯಾರ್ಥಿನಿಯರಿಂದ ಪ್ರತಿಭಟನೆ
ನಗರದ ಗಾಂಧಿ ವೃತ್ತದಿಂದ ಅಂಬೇಡ್ಕರ್ ವೃತ್ತದವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿದ ವಿದ್ಯಾರ್ಥಿನಿಯರು, ಮಾನವ ಸರಪಳಿ ನಿರ್ಮಿಸಿ ಕೆಲಕಾಲ ರಸ್ತೆ ತಡೆ ನಡೆಸಿದರು. ಅತ್ಯಾಚಾರ ಆರೋಪಿಗಳಿಗೆ ಗಲ್ಲು ಶಿಕ್ಷೆ ವಿಧಿಸಿ, ಸಾರ್ವಜನಿಕವಾಗಿ ನೇಣಿಗೆ ಏರಿಸಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.
ಪ್ರತಿಭಟನೆ ಹಿನ್ನೆಲೆಯಲ್ಲಿ ಅಂಬೇಡ್ಕರ್ ವೃತ್ತದಲ್ಲಿ ಕೆಲ ಕಾಲ ವಾಹನ ಸಂಚಾರಕ್ಕೆ ತೊಡಕಾಯಿತು. ಈ ವೇಳೆ ಉಪ ತಹಶೀಲ್ದಾರ್ ಶಿವಾನಂದ ಮೇತ್ರೆ ಅವರಿಗೆ ಮನವಿ ಪತ್ರ ಸಲ್ಲಿಸಲಾಯಿತು.