ಬೆಂಗಳೂರು:ಎಫ್‌ಐಆರ್ ದಾಖಲಾದ 24 ಗಂಟೆಯಲ್ಲಿ ಅದನ್ನು ವೆಬ್‌ಸೈಟ್‌ನಲ್ಲಿ ಹಾಕಲು ಲೋಕಾಯುಕ್ತಕ್ಕೆ ನಿರ್ದೇಶನ ನೀಡಬೇಕು ಎಂದು ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ಸಂಬಂಧ ಹೈಕೋರ್ಟ್ ಲೋಕಾಯುಕ್ತಕ್ಕೆ ನೋಟಿಸ್ ಜಾರಿ ಮಾಡಿದೆ.
ವಕೀಲ ಎಸ್. ಉಮಾಪತಿ ಅವರು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದರು. ಈ ಅರ್ಜಿ ವಿಚಾರಣೆ ನಡೆಸಿದ ಮುಖ್ಯನ್ಯಾಯಮೂರ್ತಿ ಪಿ.ಬಿ.ವರಾಲೆ ಅವರಿದ್ದ ವಿಭಾಗೀಯ ಪೀಠ, ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ, ಲೋಕಾಯುಕ್ತ ಎಡಿಜಿಪಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆ ಮುಂದೂಡಿದೆ.
ಆದೇಶ ನೀಡಿದ್ದ ಸುಪ್ರೀಂಕೋರ್ಟ್:ಎಫ್‌ಐಆರ್ ದಾಖಲಾದ 24 ಗಂಟೆಯಲ್ಲಿ ಅದನ್ನು ಸಂಬಂಧಪಟ್ಟ ಅಧಿಕೃತ ವೆಬ್‌ಸೈಟ್‌ನಲ್ಲಿ ಪ್ರಕಟಿಸಬೇಕು ಎಂದು 2016ರಲ್ಲಿ ಸುಪ್ರೀಂಕೋರ್ಟ್ ಆದೇಶ ನೀಡಿದೆ. ಇದನ್ನು ಸಿಬಿಐ ಸೇರಿದಂತೆ ಉಳಿದ ತನಿಖಾ ಸಂಸ್ಥೆಗಳು ಪಾಲಿಸುತ್ತಿವೆ. ಸುಪ್ರೀಂಕೋರ್ಟ್ ಆದೇಶವನ್ನು ಕಡ್ಡಾಯವಾಗಿ ಪಾಲಿಸುವಂತೆ 2018ರಲ್ಲಿ ಎಸಿಬಿ ಮತ್ತು ಬಿಎಂಟಿಎಫ್‌ಗೆ ಹೈಕೋರ್ಟ್ ನಿರ್ದೇಶನ ನೀಡಿದೆ. ಅದನ್ನು ಎಸಿಬಿ ಪಾಲಿಸುತ್ತ ಬಂದಿತ್ತು.