ಬೀದರ್: ವಿದ್ಯಾರ್ಥಿನಿಯೊಬ್ಬಳು ವಸತಿ ಶಾಲೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೊಳಾರ ಗ್ರಾಮದ ನವಜೀವನ ವಸತಿ ಶಾಲೆಯಲ್ಲಿ ನಡೆದಿದೆ.
ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ - ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
ವಿದ್ಯಾರ್ಥಿನಿಯೊಬ್ಬಳು ವಸತಿ ಶಾಲೆಯ ಕೊಠಡಿಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಕೊಳಾರ ಗ್ರಾಮದ ನವಜೀವನ ವಸತಿ ಶಾಲೆಯಲ್ಲಿ ನಡೆದಿದೆ.
ವಸತಿ ಶಾಲೆಯಲ್ಲಿ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ
9 ನೇ ತರಗತಿಯ ಸುಪ್ರಿಯಾ (15) ಆತ್ಮಹತ್ಯೆ ಮಾಡಿಕೊಂಡ ಬಾಲಕಿ. ಮೃತ ಬಾಲಕಿ ಔರಾದ್ ಪಟ್ಟಣದ ಸೋಮನಾಥಪೂರ ತಾಂಡಾ ನಿವಾಸಿಯಾಗಿದ್ದಾಳೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದುಬಂದಿಲ್ಲ. ಬಾಲಕಿಯ ಸಾವಿನಿಂದಾಗಿ ವಸತಿ ಶಾಲೆಯಲ್ಲಿ ಭಯದ ವಾತಾವರಣ ನಿರ್ಮಾಣವಾಗಿದ್ದು, ಸ್ಥಳಕ್ಕೆ ನ್ಯೂಟೌನ್ ಪೊಲೀಸರು ಭೇಟಿ ನೀಡಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.