ಬೀದರ್: ಮಹಾರಾಷ್ಟ್ರದ ಮುಂಬೈನಿಂದ ವಾಪಸಾದ ಯುವಕನೊಬ್ಬ ಕ್ವಾರಂಟೈನ್ ಕೇಂದ್ರದಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಬೀದರ್ನ ಕ್ವಾರಂಟೈನ್ ಕೇಂದ್ರದಲ್ಲಿ ನವವಿವಾಹಿತ ಆತ್ಮಹತ್ಯೆ! - ರಾಜ್ಯದಲ್ಲಿ ಕೊರೊನಾ ಪ್ರಕರಣಗಳು
ನವವಿವಾಹಿತನೊಬ್ಬ ಕ್ವಾರಂಟೈನ್ ಕೇಂದ್ರದಲ್ಲಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ವನಮಾರಪಳ್ಳಿಯಲ್ಲಿ ನಡೆದಿದೆ.
ಬೀದರ್ನ ಕ್ವಾರೆಂಟೈನ್ ಕೇಂದ್ರದಲ್ಲಿ ನವವಿವಾಹಿತ ಆತ್ಮಹತ್ಯೆ..!
ಔರಾದ್ ತಾಲೂಕಿನ ವನಮಾರಪಳ್ಳಿ ಗ್ರಾಮದ ಹೊರ ವಲಯದಲ್ಲಿರುವ ಕಿತ್ತೂರ ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಸಚಿನ್ ಜಾಧವ್(22) ಎಂಬಾತ ನೇಣಿಗೆ ಶರಣಾಗಿದ್ದಾನೆ. ನಾರಾಯಣಪುರ ಗ್ರಾಮದ ನಿವಾಸಿಯಾದ ಈತ, ಒಂದು ವಾರದ ಹಿಂದಷ್ಟೇ ಪತ್ನಿ ಜೊತೆ ಮುಂಬೈನಿಂದ ಹಿಂದಿರುಗಿದ್ದ. ಇಬ್ಬರೂ ಕ್ವಾರಂಟೈನ್ನಲ್ಲಿದ್ದರು.
ಸಚಿನ್ ಜಾಧವ್ ಈ ವರ್ಷವಷ್ಟೇ ಅಂತರ್ಜಾತಿ ವಿವಾಹ ಮಾಡಿಕೊಂಡಿದ್ದ. ಈತನ ಆತ್ಮಹತ್ಯೆ ಹಲವು ಅನುಮಾನಗಳಿಗೆ ಕಾರಣವಾಗಿದೆ. ಸ್ಥಳಕ್ಕೆ ಔರಾದ್ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದಾರೆ.