ಬಸವಕಲ್ಯಾಣ:ನಿಯಂತ್ರಣ ತಪ್ಪಿದ ಟಾಟಾ ಏಸ್ ವಾಹನ ಲಾರಿಗೆ ಡಿಕ್ಕಿಯಾದ ಪರಿಣಾಮ ಬಾಲಕ ಸೇರಿದಂತೆ ಇಬ್ಬರು ಗಾಯಗೊಂಡಿರುವ ಘಟನೆ ಸಸ್ತಾಪುರ ಬಂಗ್ಲಾ ಬಳಿ ನಡೆದಿದೆ.
ನಗರದ ನಾಗೇಶ ಕೋಟೆ(16) ಹಾಗೂ ತಾಲೂಕಿನ ಮಂಠಾಳ ಗ್ರಾಮದ ಟಾಟಾ ಏಸ್ ವಾಹನ ಚಾಲಕ ಸಚಿನ್ ಖತಾಟೆ ಘಟನೆಯಲ್ಲಿ ಗಾಯಗೊಂಡಿದ್ದಾರೆ. ಮುಂಬೈ- ಹೈದರಾಬಾದ್ ರಾಷ್ಟ್ರೀಯ ಹೆದ್ದಾರಿ-65ರಲ್ಲಿ ಸಾಗುತ್ತಿದ್ದ ಟಾಟಾ ಏಸ್ ವಾಹನ ನಿಯಂತ್ರಣ ತಪ್ಪಿ ರಸ್ತೆ ಪಕ್ಕದಲ್ಲಿ ನಿಂತಿದ್ದ ಬಾಲಕನಿಗೆ ಡಿಕ್ಕಿ ಹೊಡೆದು ಬಳಿಕ ನಿಂತಿದ್ದ ಲಾರಿಗೆ ಡಿಕ್ಕಿ ಹೊಡೆದಿದೆ.