ಬೀದರ್:ಶಾಲಾ ವಾರ್ಷಿಕೋತ್ಸವದಲ್ಲಿ ಪೌರತ್ವ (ತಿದ್ದುಪಡಿ) ಕಾಯ್ದೆ (ಸಿಎಎ) ವಿರೋಧಿಸಿ ಮಾಡಲಾದ ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಅವಮಾನಿಸಿದ ಪ್ರಕರಣಕ್ಕೆ ಸಂಬಂಧಪಟ್ಟಂತೆ ನ್ಯಾಯಾಂಗ ಬಂಧನದಲ್ಲಿರುವ ಶಿಕ್ಷಕಿ ಹಾಗೂ ವಿದ್ಯಾರ್ಥಿನಿ ತಾಯಿಯ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ ತೀರ್ಪು ಕಾಯ್ದಿರಿಸಿದೆ.
ಶಾಹೀನ್ ಶಿಕ್ಷಣ ಸಂಸ್ಥೆ ಶಿಕ್ಷಕಿಯ ಜಾಮೀನು ಅರ್ಜಿ ವಿಚಾರಣೆ: ತೀರ್ಪು ಕಾಯ್ದಿರಿಸಿದ ನ್ಯಾಯಾಲಯ
ನಗರದ ಶಾಹೀನ್ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದರ್ಶನ ಮಾಡಲಾದ ಸಿಎಎ ವಿರೋಧಿ ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಅವಮಾನಿಸಲಾಗಿದೆ ಎಂದು ಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿನಿಯೋರ್ವಳ ತಾಯಿ ನಜಬುನ್ನಿಸಾ ವಿರುದ್ಧ ಪ್ರಕರಣ ದಾಖಲಾಗಿಸಿ ಬಂಧಿಸಲಾಗಿತ್ತು. ಈ ಬಗ್ಗೆ ಜಾಮೀನು ಕೋರಿ ಇಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು.
ನಗರದ ಶಾಹೀನ್ ಶಿಕ್ಷಣ ಸಂಸ್ಥೆಯ ವಾರ್ಷಿಕೋತ್ಸವ ಸಮಾರಂಭದಲ್ಲಿ ಪ್ರದರ್ಶನ ಮಾಡಲಾದ ಸಿಎಎ ವಿರೋಧಿ ನಾಟಕದಲ್ಲಿ ಪ್ರಧಾನಿ ನರೇಂದ್ರ ಮೋದಿಯನ್ನು ಅವಮಾನಿಸಲಾಗಿದೆ ಎಂದು ಶಿಕ್ಷಕಿ ಫರೀದಾ ಬೇಗಂ ಹಾಗೂ ವಿದ್ಯಾರ್ಥಿನಿಯೋರ್ವಳ ತಾಯಿ ನಜಬುನ್ನಿಸಾ ವಿರುದ್ಧ ಪ್ರಕರಣ ದಾಖಲಾಗಿಸಿ ಬಂಧಿಸಲಾಗಿತ್ತು. ಈ ಬಗ್ಗೆ ಜಾಮೀನು ಕೋರಿ ಇಬ್ಬರು ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದರು, ಅರ್ಜಿ ವಿಚಾರಣೆ ನಡೆಸಿದ ಜಿಲ್ಲಾ ಸತ್ರ ಮತ್ತು ಪ್ರಧಾನ ನ್ಯಾಯಾಲಯ ಫೆ.14ಕ್ಕೆ ತೀರ್ಪು ಕಾಯ್ದಿರಿಸಿದೆ.
ಪ್ರಕರಣದಲ್ಲಿ ಶಾಲಾ ಆಡಳಿತ ಮಂಡಳಿಯೂ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದು, ಈ ಅರ್ಜಿ ವಿಚಾರಣೆಯನ್ನು ಫೆ.17 ರಂದು ನ್ಯಾಯಾಲಯ ಕೈಗೆತ್ತಿಕೊಳ್ಳಲಿದೆ. ಈ ವೇಳೆ ಸರ್ಕಾರಿ ಅಭಿಯೋಜಕರಿಗೆ ವಾದ ಮಂಡಿಸಲು ನ್ಯಾಯಾಲಯ ಅವಕಾಶ ನೀಡಲಿದೆ ಎಂದು ಶಾಹೀನ್ ಶಿಕ್ಷಣ ಸಂಸ್ಥೆ ಪರ ವಾದ ಮಂಡಿಸಿದ ನ್ಯಾಯವಾದಿ, ಬಿ.ಕೆ ವೆಂಕಟೇಶ್ ತಿಳಿಸಿದ್ದಾರೆ.