ಬಸವಕಲ್ಯಾಣ: ಗ್ರಾಮ ಪಂಚಾಯಿತಿ ಚುನಾವಣೆ ನಿಮಿತ್ತ ಕರ್ತವ್ಯನಿರತ ಮತಗಟ್ಟೆ ಅಧಿಕಾರಿಯೊಬ್ಬರು ಮೂರ್ಛೆ ರೋಗಕ್ಕೆ ತುತ್ತಾಗಿ ಆಸ್ಪತ್ರೆ ಸೇರಿದ ಘಟನೆ ತಾಲೂಕಿನ ಹಾರಕೂಡ ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಮತಗಟ್ಟೆ ಸಂಖ್ಯೆ-155 ರಲ್ಲಿ ಮತಗಟ್ಟೆ ಅಧಿಕಾರಿ(ಪಿಆರ್ಓ)ಯಾಗಿ ಕರ್ತವ್ಯಕ್ಕೆ ಹಾಜರಾಗಿದ್ದ ಉಮೇಶ ಸಾಳುಂಕೆ ಎನ್ನುವ ಅಧಿಕಾರಿ ಅನಿರೀಕ್ಷಿತವಾಗಿ ಮೂರ್ಛೆ ರೋಗಕ್ಕೆ ತುತ್ತಾಗಿದ್ದು, ತಕ್ಷಣ ಅವರನ್ನು ಆ್ಯಂಬುಲೆನ್ಸ್ ಮೂಲಕ ಬಸವಕಲ್ಯಾಣ ಸರ್ಕಾರಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಸದ್ಯಕ್ಕೆ ಆರೋಗ್ಯ ಸ್ಥಿರವಾಗಿದೆ ಎಂದು ವೈದ್ಯಕೀಯ ಮೂಲಗಳಿಂದ ತಿಳಿದು ಬಂದಿದೆ.