ಕರ್ನಾಟಕ

karnataka

ETV Bharat / state

ಬಸವಕಲ್ಯಾಣ: ಮಹಾ ಮಾರಿ ಡೆಂಗ್ಯೂಗೆ ಯುವಕ ಬಲಿ - ಬಸವಕಲ್ಯಾಣ ಡೆಂಗ್ಯೂಗೆ ಯುವಕ ಬಲಿ ಸುದ್ದಿ

ಬಸವಕಲ್ಯಾಣದಲ್ಲಿ ಯುವಕ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಬಸವಕಲ್ಯಾಣ ತಾಲೂಕಿನ ಕಿಣ್ಣಿವಾಡಿ ಗ್ರಾಮದಲ್ಲಿ ನಡೆದಿದೆ.

ಡೆಂಗ್ಯೂಗೆ ಬಲಿಯಾದ ಯುವಕ

By

Published : Nov 21, 2019, 10:23 PM IST

ಬಸವಕಲ್ಯಾಣ:ಮಹಾ ಮಾರಿ ಡೆಂಗ್ಯೂ ನರ್ತನ ಸದ್ಯಕ್ಕೆ ಕಡಿಮೆಯಾಗುವ ಲಕ್ಷಣಗಳು ಕಂಡು ಬರುತ್ತಿಲ್ಲ. ಶಂಕಿತ ಡೆಂಗ್ಯೂಗೆ ಬಲಿಯಾದವರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚುತ್ತಲೆ ಇದ್ದು, ಬುಧವಾರ ಮತ್ತೊಬ್ಬ ಯುವಕ ಶಂಕಿತ ಡೆಂಗ್ಯೂ ಜ್ವರಕ್ಕೆ ಬಲಿಯಾದ ಘಟನೆ ಬಸವಕಲ್ಯಾಣ ತಾಲೂಕಿನ ಕಿಣ್ಣಿವಾಡಿ ಗ್ರಾಮದಲ್ಲಿ ನಡೆದಿದೆ.

ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದ್ದು, ಚಿಕಿತ್ಸೆ ಫಲಕಾರಿಯಾಗದೆ ಯುವಕ ಕೊನೆಯುಸಿರೆಳೆದಿದ್ದಾನೆ.

ಗ್ರಾಮದ ವಿಷ್ಣು ಅಲಿಯಾಸ್​ ಗೋರ್ವಧನ ಎಕ್ಕಂಬೆ (18) ಡೆಂಗ್ಯೂಗೆ ಬಲಿದಾಗ ಯುವಕನಾಗಿದ್ದಾನೆ. ಕಳೆದ ಒಂದು ವಾರದಿಂದ ಜ್ವರದಿಂದ ಬಳಲಿದ ಈತನಿಗೆ ಸ್ಥಳೀಯ ಖಾಸಗಿ ಆಸ್ಪತ್ರೆಯಲ್ಲಿ ದಾಖಲಿಸಿ ಚಿಕಿತ್ಸೆ ನೀಡಲಾಗಿತ್ತು. ಆದರೆ ಜ್ವರದ ತೀವ್ರತೆಯಿಂದಾಗಿ ಮಂಗಳವಾರ ಮಹಾರಾಷ್ಟ್ರದ ಉಮ್ಮರಗಾದ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತಿತ್ತು. ಚಿಕಿತ್ಸೆ ಫಲಕಾರಿಯಾಗದೆ ಯುವಕ ಬುಧವಾರ ಮಧ್ಯಾಹ್ನ ಕೊನೆಯುಸಿರೆಳೆದಿದ್ದಾನೆ.

ಆದರೆ ಈ ಬಗ್ಗೆ ತಮ್ಮ ಇಲಾಖೆಗೆ ಯಾವುದೇ ಮಾಹಿತಿ ಇಲ್ಲ ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿ ಡಾ.ಜಬ್ಬಾರ ತಿಳಿಸಿದ್ದಾರೆ.

ABOUT THE AUTHOR

...view details