ಬೀದರ್: ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ನೆರೆ ಪರಿಹಾರ ನೀಡುವಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಈಶ್ವರ್ ಖಂಡ್ರೆ - ಕೇಂದ್ರ ಸರ್ಕಾರ
ನೆರೆ ಸಂತ್ರಸ್ತರಿಗೆ ಕೇಂದ್ರ ಸರ್ಕಾರ ಪರಿಹಾರ ನೀಡುವಲ್ಲಿ ವಿಫಲವಾಗಿದೆ ಎಂದು ಆರೋಪಿಸಿ ಕಾಂಗ್ರೆಸ್ ಕಾರ್ಯಕರ್ತರು ಕೆಪಿಸಿಸಿ ಕಾರ್ಯಧ್ಯಕ್ಷ ಈಶ್ವರ ಖಂಡ್ರೆ ನೇತೃತ್ವದಲ್ಲಿ ಪ್ರತಿಭಟನೆ ನಡೆಸಿದ್ರು.
![ನೆರೆ ಪರಿಹಾರ ನೀಡುವಲ್ಲಿ ಕೇಂದ್ರದಿಂದ ಮಲತಾಯಿ ಧೋರಣೆ: ಈಶ್ವರ್ ಖಂಡ್ರೆ](https://etvbharatimages.akamaized.net/etvbharat/prod-images/768-512-4418233-thumbnail-3x2-bdr.jpg)
ಈಶ್ವರ್ ಖಂಡ್ರೆ
ನಗರದ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ಅವರ ನೇತೃತ್ವದಲ್ಲಿ ಹಲವು ನಾಯಕರು ಕೇಂದ್ರ ಸರ್ಕಾರ ಹಾಗೂ ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಕೇಂದ್ರ ಸರ್ಕಾರ ದಪ್ಪ ಚರ್ಮದ ಸರ್ಕಾರವಾಗಿದೆ- ಖಂಡ್ರೆ
ಕೇಂದ್ರ ಸರ್ಕಾರ ದಪ್ಪ ಚರ್ಮದ ಸರ್ಕಾರವಾಗಿದೆ. ಕೇಂದ್ರ ಸರ್ಕಾರ ಕರ್ನಾಟಕಕ್ಕೆ ಮಲತಾಯಿ ಧೋರಣೆ ಮಾಡುತ್ತಿದೆ. ಪ್ರಧಾನಮಂತ್ರಿ ಬಳಿ ರಾಜ್ಯದ ಮುಖ್ಯಮಂತ್ರಿ ಹೋದರೂ ಅವರಿಗೆ ಭೇಟಿ ಮಾಡುವ ಅವಕಾಶ ನೀಡುತ್ತಿಲ್ಲ. ಮುಖ್ಯಮಂತ್ರಿಯವರಿಗೆ ಅವಮಾನ ಮಾಡಿದರೆ ಕರ್ನಾಟಕದ ಜನತೆಗೆ ಅವಮಾನ ಮಾಡಿದ ಹಾಗೆ ಎಂದು ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ಕೆಪಿಸಿಸಿ ಕಾರ್ಯಾಧ್ಯಕ್ಷ ಹರಿಹಾಯ್ದರು.