ಕರ್ನಾಟಕ

karnataka

ETV Bharat / state

ಇಂದು ಕಲಬುರಗಿಯಲ್ಲಿ 81, ಬೀದರ್​ನಲ್ಲಿ 19, ಯಾದಗಿರಿ ಜಿಲ್ಲೆಯಲ್ಲಿ 100 ಜನರಿಗೆ ಕೊರೊನಾ ಸೋಂಕು ದೃಢ.... - corona latest news yadgiri

ಕಲಬುರಗಿ ಜಿಲ್ಲೆಯಲ್ಲಿ ಇಂದು ಜಿಲ್ಲೆಯಲ್ಲಿ 81 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ 18,511 ಗೆ ಏರಿಕೆಯಾಗಿದೆ. ಹಾಗೆಯೇ ಬೀದರ್ ಜಿಲ್ಲೆಯಲ್ಲಿ 19 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, 31 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಇನ್ನು ಯಾದಗಿರಿ ಜಿಲ್ಲೆಯಲ್ಲಿಂದು ಹೊಸದಾಗಿ 100 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

corona news
ಕೊರೊನಾ

By

Published : Oct 11, 2020, 11:59 PM IST

ಕಲಬುರಗಿ/ಬೀದರ್/ಯಾದಗಿರಿ: ಕಲಬುರಗಿ ಜಿಲ್ಲೆಯಲ್ಲಿ ಕೊರೊನಾಗೆ ಮತ್ತೋರ್ವ ಬಲಿಯಾದ್ದಾನೆ. ಇದರೊಂದಿಗೆ ಜಿಲ್ಲೆಯಲ್ಲಿ ಮೃತರ ಸಂಖ್ಯೆ 295 ಕ್ಕೆ ಏರಿಕೆಯಾಗಿದೆ.

ಇಂದು ಜಿಲ್ಲೆಯಲ್ಲಿ 81 ಜನರಿಗೆ ಸೋಂಕು ದೃಢಪಟ್ಟಿದ್ದು, ಜಿಲ್ಲೆಯ ಸೋಂಕಿತರ ಸಂಖ್ಯೆ 18,511 ಗೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಇಂದು 806 ಸೋಂಕಿತರು ಡಿಸ್ಚಾರ್ಜ್ ಆಗಿದ್ದು, ಡಿಸ್ಚಾರ್ಜ್ ಆದವರ ಸಂಖ್ಯೆ 16,943 ಕ್ಕೆ ಏರಿಕೆಯಾಗಿದೆ. ಜಿಲ್ಲೆಯಲ್ಲಿ ಒಟ್ಟು 1,273 ಸಕ್ರಿಯ ಪ್ರಕರಣಗಳಿವೆ.

ಜಿಲ್ಲಾವಾರು ಕೋವಿಡ್​ ಅಂಕಿ ಅಂಶಗಳ ವಿವರ

ಇನ್ನು ಬೀದರ್ ಜಿಲ್ಲೆಯಲ್ಲಿ ಕೊರೊನಾ ರೌದ್ರಾವತಾರ ಕ್ರಮೇಣ ಹತೋಟಿಯತ್ತ ಬರ್ತಿದ್ದು, ಕಳೆದ ಎರಡು ವಾರಗಳಲ್ಲಿ ಸೋಂಕಿತರ ಸಂಖ್ಯೆ ಇಳಿಮುಖವಾಗ್ತಿದ್ದು ಗುಣಮುಖರಾಗುತ್ತಿರುವವರ ಸಂಖ್ಯೆ ಹೆಚ್ಚಾಗುತ್ತಿದೆ. ಇಂದು ಜಿಲ್ಲೆಯಲ್ಲಿ 19 ಜನರಲ್ಲಿ ಕೊರೊನಾ ಸೋಂಕು ದೃಢವಾಗಿದ್ದು, 31 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಈ ಮೂಲಕ ಸೋಂಕಿತರ ಸಂಖ್ಯೆ 6,694 ಕ್ಕೆ ಎರಿಕೆಯಾಗಿದ್ದು 6,162 ಜನ ಸೋಂಕಿತರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. ಅಲ್ಲದೆ 162 ಜನರು ಸಾವನಪ್ಪಿದ್ದು 366 ಜನ ಸೋಂಕಿತರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಕೊರೊನಾ ಬುಲೇಟಿನ್​ನಲ್ಲಿ ತಿಳಿಸಲಾಗಿದೆ.

ಇನ್ನು ಯಾದಗಿರಿ ಜಿಲ್ಲೆಯಲ್ಲಿಂದು ಹೊಸದಾಗಿ 100 ಜನರಿಗೆ ಕೊರೊನಾ ಸೋಂಕು ದೃಢಪಟ್ಟಿದ್ದು, ಸೋಂಕಿತರು ಸಂಖ್ಯೆ 9,498 ಕ್ಕೆ ಏರಿಕೆಯಾಗಿದೆ. ಕೊರೊನಾ ಸೋಂಕಿಗೆ ಜಿಲ್ಲೆಯಲ್ಲಿ ಇಂದು ಒಬ್ಬರು ಅಸುನೀಗಿದ್ದು, ಇದುವರೆಗೆ ಈ ಸೋಂಕಿನಿಂದ ಒಟ್ಟು 58 ಜನ ಮೃತಪಟ್ಟಿದ್ದಾರೆ. ಜಿಲ್ಲೆಯಲ್ಲಿ ಕೋವಿಡ್ ಸೋಂಕಿನಿಂದ ಆಸ್ಪತ್ರೆಗೆ ದಾಖಲಾದವರಲ್ಲಿ ಇಂದು 117 ಜನ ಸಂಪೂರ್ಣ ಗುಣಮುಖರಾಗಿ ಡಿಸ್ಚಾರ್ಜ್​ ಹೊಂದುವ ಮೂಲಕ ಇಲ್ಲಿಯವರೆಗೆ 8,423 ಮಂದಿ ಗುಣಮುಖರಾಗಿದ್ದಾರೆ.

ಒಟ್ಟು ಸಕ್ರಿಯ ಪ್ರಕರಣಗಳಲ್ಲಿ 1,017 ಮಂದಿ ಸೋಂಕಿತರು ಜಿಲ್ಲೆಯ ವಿವಿಧ ಕೋವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ABOUT THE AUTHOR

...view details