ಬಸವಕಲ್ಯಾಣ: ಚಲಿಸುತ್ತಿದ್ದ ಲಾರಿಗೆ ಬೆಂಕಿ ತಗುಲಿ ಲಾರಿ ಸಹಿತ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾದ ಘಟನೆ ರಾಜ್ಯದ ಗಡಿಯಲ್ಲಿರುವ ಬಸವಕಲ್ಯಾಣ ತಾಲೂಕಿನ ರಾಷ್ಟ್ರೀಯ ಹೆದ್ದಾರಿ- 65 ರ ಚಂಡಕಾಪುರದ ಸಮೀಪ ಭಾನುವಾರ ಮಧ್ಯಾಹ್ನ ನಡೆದಿದೆ.
ಮಹಾರಾಷ್ಟ್ರದ ಮುಂಬೈ ಮೂಲದ ಲಾರಿ ಆಂಧ್ರಪ್ರದೇಶದ ಗುಂಟೂರುನಿಂದ ಮುಂಬೈ ಕಡೆಗೆ ತೆರಳುತಿತ್ತು. ಈ ವೇಳೆ ಶಾರ್ಟ್ ಸರ್ಕ್ಯೂಟ್‌ನಿಂದಾಗಿ ಲಾರಿಗೆ ಬೆಂಕಿ ತಗುಲಿದೆ. ಪರಿಣಾಮ ಲಾರಿ ಸಹಿತ ಅದರಲ್ಲಿದ್ದ ಲಕ್ಷಾಂತರ ಮೌಲ್ಯದ ದಾರದ (ನೂಲು) ಬಂಡಲ್‌ಗಳು ಸುಟ್ಟು ಕರಕಲಾಗಿವೆ. ಲಾರಿ ಚಾಲಕ ಪ್ರಾಣಾಪಾಯದಿಂದ ಪಾರಾಗಿದ್ದಾನೆ ಎಂದು ಪ್ರತಕ್ಷದರ್ಶಿಗಳು ತಿಳಿಸಿದ್ದಾರೆ.