ಬೀದರ್:ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಚಿಟಗುಪ್ಪ ಪಟ್ಟಣದ ಕಟೇನ್ಮೆಂಟ್ ಏರಿಯಾದಲ್ಲಿ ಇಂದು ಇಬ್ಬರಲ್ಲಿ ಸೋಂಕು ಪತ್ತೆಯಾಗಿದೆ.
ಬೀದರ್ನಲ್ಲಿ ಸೋಂಕಿನಿಂದ ಮೃತಪಟ್ಟ ತಂದೆಯಿಂದ ಮಕ್ಕಳಿಬ್ಬರಿಗೆ ಕೊರೊನಾ! - Bidar district news
ಗಡಿ ನಾಡು ಬೀದರ್ ಜಿಲ್ಲೆಯಲ್ಲಿ ಒಂದೆಡೆ ಕೋವಿಡ್ ಸಾವಿನ ಸರಣಿ ಮುಂದುವರೆದರೆ, ಮತ್ತೊಂದೆಡೆ ಸೋಂಕಿತರ ಸಂಖ್ಯೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಲೇ ಇದೆ.
ಗಡಿ ನಾಡು ಬೀದರ್ ಜಿಲ್ಲೆಯಲ್ಲಿ ಎರಡು ಕೋವಿಡ್ ಸೋಂಕು
ಚಿಟಗುಪ್ಪ ಪಟ್ಟಣದಲ್ಲಿ ಕೊರೊನಾ ಸೋಂಕಿನಿಂದ 75 ವಯಸ್ಸಿನ ವೃದ್ಧರೊಬ್ಬರು ಮೃತಪಟ್ಟಿದ್ದರು. ಅವರ ಪ್ರಾಥಮಿಕ ಸಂಪರ್ಕಕ್ಕೆ ಬಂದ ಅವರ ಇಬ್ಬರು ಗಂಡು ಮಕ್ಕಳಲ್ಲಿಯೂ ಈಗ ಸೋಂಕು ಪತ್ತೆಯಾಗಿದೆ.
ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 165ಕ್ಕೆ ಎರಿಕೆಯಾಗಿದ್ದು, ಇಲ್ಲಿಯವರೆಗೆ 5 ಜನರು ಮೃತಪಟ್ಟಿದ್ದಾರೆ. ಇಂದು 14 ಜನರು ಗುಣಮುಖರಾಗಿದ್ದು, ಒಟ್ಟು ಗುಣಮುಖರಾದವರ ಸಂಖ್ಯೆ 41 ಆಗಿದೆ. ಉಳಿದವರು ಕೊರೊನಾ ವಾರ್ಡ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.