ಬೀದರ್:ಕೊರೊನಾ ಅಟ್ಟಹಾಸ ಜಿಲ್ಲೆಯಲ್ಲಿ ಮುಂದುವರೆದಿದ್ದು, ಇಂದು ಒಂದೇ ದಿನ ಜಿಲ್ಲೆಯಾದ್ಯಂತ 64 ಜನರಲ್ಲಿ ಸೋಂಕು ಪತ್ತೆಯಾಗಿದೆ.
ಜಿಲ್ಲೆಯ ಭಾಲ್ಕಿ, ಬಸವಕಲ್ಯಾಣ, ಹುಮನಾಬಾದ್, ಔರಾದ್, ಬೀದರ್ ತಾಲೂಕಿನಲ್ಲಿ ಸೋಂಕಿತರು ಪತ್ತೆಯಾಗಿದ್ದಾರೆ. ಈ ಮೂಲಕ ಜಿಲ್ಲೆಯಲ್ಲಿ ಸೋಂಕಿತರ ಸಂಖ್ಯೆ 6,381 ಕ್ಕೆ ಏರಿಕೆಯಾಗಿದೆ.