ಬಸವಕಲ್ಯಾಣ:ರಾಜಕೀಯ ಪಕ್ಷಗಳ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಮನೆಗೆ ಮರಳುತ್ತಿದ್ದವರ ಕಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ತಾಲೂಕಿನ ಬಂದೇನವಾಜ್ ವಾಡಿ ಗ್ರಾಮದ ಕ್ರಾಸ್ ಬಳಿ ಸಂಭವಿಸಿದೆ.
ಕಾರಿಗೆ ಬಸ್ ಡಿಕ್ಕಿ : ಇಬ್ಬರ ಸಾವು, ಮತ್ತಿಬ್ಬರಿಗೆ ಗಂಭೀರ ಗಾಯ
ಕಾರಿಗೆ ಬಸ್ ಡಿಕ್ಕಿಯಾಗಿ ಇಬ್ಬರು ಸ್ಥಳದಲ್ಲೇ ಮೃತಪಟ್ಟು, ಮತ್ತಿಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ಬಸವಕಲ್ಯಾಣ ತಾಲೂಕಿನಲ್ಲಿ ಸಂಭವಿಸಿದೆ.
ಕಾರಿಗೆ ಬಸ್ ಡಿಕ್ಕಿ :
ತಾಲೂಕಿನ ಗದಲೇಗಾಂವ ತಾಂಡಾದ ಸುಭಾಷ್ ಚವ್ಹಾಣ್ (55) ಹಾಗೂ ಹಾರಕೂಡ ಗ್ರಾಮದ ಚಿತ್ತಣ್ಣ ಮರೆಪ್ಪ ಗುಡ್ಡೆ (45) ಘಟನೆಯಲ್ಲಿ ಮೃತಪಟ್ಟವರು. ಗದಲೇಗಾಂವ ತಾಂಡಾದ ತುಕಾರಾಮ ಚವ್ಹಾಣ್, ಭೀಮಶಾ ಚವ್ಹಾಣ್ ಎನ್ನುವರಿಗೆ ಗಂಭೀರವಾಗಿ ಗಾಯಗಳಾಗಿದ್ದು, ಕಲಬುರಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.
ಬಸವಕಲ್ಯಾಣ ಉಪ ಚುನಾವಣೆ ಹಿನ್ನೆಲೆ ಕಾಂಗ್ರೆಸ್ ಹಾಗೂ ಬಿಜೆಪಿ ಪಕ್ಷದ ಸಮಾವೇಶದಲ್ಲಿ ಭಾಗವಹಿಸಿ ಕಾರಿನಲ್ಲಿ ಗ್ರಾಮಕ್ಕೆ ಮರಳುವಾಗ ಎದುರಿನಿಂದ ಬಂದ ಸಾರಿಗೆ ಬಸ್ ಡಿಕ್ಕಿಯಾಗಿ ಘಟನೆ ಸಂಭವಿಸಿದೆ. ಈ ಬಗ್ಗೆ ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.