ಬೀದರ್: ಕೆಎಸ್ಆರ್ಟಿಸಿ ಬಸ್ ಹಾಗೂ ಕಾರ್ ನಡುವೆ ಅಪಘಾತ ಸಂಭವಿಸಿ ಕಾರಿನಲ್ಲಿದ್ದ ಇಬ್ಬರು ಸ್ಥಳದಲ್ಲೇ ಸಾವಿಗೀಡಾದ ಘಟನೆ ಬೀದರ್ ಜಿಲ್ಲೆಯ ಹೊನ್ನಿಕೇರಿ ಕ್ರಾಸ್ ಬಳಿ ನಡೆದಿದೆ. ತೆಲಂಗಾಣದಿಂದ ಮಹಾರಾಷ್ಟ್ರದ ಉದಗೀರ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ. ಮೃತರು ಹೈದರಾಬಾದ್ ಮೂಲದವರು ಎಂದು ಗುರುತಿಸಲಾಗಿದೆ.
ಬೀದರ್: ಸಾರಿಗೆ ಬಸ್-ಕಾರ್ ನಡುವೆ ಅಪಘಾತ, ಇಬ್ಬರು ಸಾವು - ಬಸ್
ತೆಲಂಗಾಣದಿಂದ ಮಹಾರಾಷ್ಟ್ರ ಕಡೆಗೆ ಕಾರಿನಲ್ಲಿ ಹೋಗುತ್ತಿದ್ದಾಗ ಎದುರಿನಿಂದ ಬಂದ ಸರ್ಕಾರಿ ಬಸ್ ಡಿಕ್ಕಿ ಹೊಡೆದಿದೆ ಎಂದು ತಿಳಿದುಬಂದಿದೆ.
ಸಾರಿಗೆ ಬಸ್ ಕಾರ್ ನಡುವೆ ಡಿಕ್ಕಿ
ಘಟನೆಯಲ್ಲಿ ಮೂವರಿಗೆ ಗಂಭೀರ ಗಾಯಗಳಾಗಿದ್ದು ಬೀದರ್ನ ಬ್ರಿಮ್ಸ್ ಆಸ್ಪತ್ರೆಗೆ ಸೇರಿಸಲಾಗಿದೆ. ಮೂವರೂ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಜನವಾಡ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ಪರಿಶೀಲನೆ ನಡೆಸಿದ್ದಾರೆ.
ಇದನ್ನೂ ಓದಿ: ಕಂಠಪೂರ್ತಿ ಕುಡಿದು ಶಾಲೆಗೆ ಬಂದ ಪ್ರಾಂಶುಪಾಲ: ಗ್ರಾಮಸ್ಥರ ಛೀಮಾರಿ