ಬಸವಕಲ್ಯಾಣ/ಬೀದರ್: ಗ್ರಾಮ ಲೆಕ್ಕಾಧಿಕಾರಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ಸರ್ವೋದಯ ಕಾಲೋನಿಯಲ್ಲಿ ನಡೆದಿದೆ.
ಬಸವಕಲ್ಯಾಣ: ನೇಣಿಗೆ ಶರಣಾದ ಗ್ರಾಮ ಲೆಕ್ಕಾಧಿಕಾರಿ - ನೇಣು ಬಿಗಿದುಕೊಂಡು ಗ್ರಾಮ ಲೆಕ್ಕಿಗ ಆತ್ಮಹತ್ಯೆ ನ್ಯೂಸ್
ಔರಾದ್ ತಾಲೂಕಿನ ದಾಬಕಾ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ. ಆತ್ಮಹತ್ಯೆಗೆ ಕಾರಣ ತಿಳಿದು ಬಂದಿಲ್ಲ.
ಸುನೀಲ ಕುಮಾರ ಸಾಗರ್(40) ಆತ್ಮಹತ್ಯೆ ಮಾಡಿಕೊಂಡ ವ್ಯಕ್ತಿ. ಮೂಲತಃ ಬೀದರ್ ತಾಲೂಕಿನ ಅಣದೂರ ಗ್ರಾಮದ ನಿವಾಸಿಯಾಗಿದ್ದ ಇವರು, ಔರಾದ್ ತಾಲೂಕಿನ ದಾಬಕಾ ಗ್ರಾಮದ ಗ್ರಾಮ ಲೆಕ್ಕಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದು, ಸದ್ಯ ಬಸವಕಲ್ಯಾಣ ನಗರದಲ್ಲಿ ವಾಸವಿದ್ರು.
ಕಳೆದ ಎರಡು ದಿನಗಳ ಹಿಂದೆ ಪತ್ನಿ ಬೀದರ್ಗೆ ತೆರಳಿದ್ದರು. ಮನೆಯಲ್ಲಿ ಯಾರೂ ಇಲ್ಲದ ವೇಳೆ ಶುಕ್ರವಾರ ರಾತ್ರಿ ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದು, ಶನಿವಾರ ಬೆಳಗ್ಗೆ ಘಟನೆ ಬೆಳಕಿಗೆ ಬಂದಿದೆ. ಆತ್ಮಹತ್ಯೆಗೆ ಸ್ಪಷ್ಟವಾದ ಕಾರಣ ತಿಳಿದು ಬಂದಿಲ್ಲ. ಘಟನಾ ಸ್ಥಳಕ್ಕೆ ನಗರ ಠಾಣೆ ಪೊಲೀಸರು ಭೇಟಿ ನೀಡಿ ಪರಿಶೀಲಿಸಿದ್ದು, ತನಿಖೆ ಮುಂದುವರೆಸಿದ್ದಾರೆ.