ಬೀದರ್:ನದಿಗೆ ಹಾರಿ ಯುವಕನೊಬ್ಬ ಆತ್ಮಹತ್ಯೆ ಮಾಡಿಕೊಂಡ ಘಟನೆ ಬೀದರ್ ಜಿಲ್ಲೆಯ ಔರಾದ್ ತಾಲೂಕಿನ ಕಂದಗೂಳ ಸೇತುವೆ ಬಳಿ ನಡೆದಿದೆ.
ಬೀದರ್ ತಾಲೂಕಿನ ಹಿಪ್ಪಳಗಾಂವ ಗ್ರಾಮದ ನಿವಾಸಿ ಗುಂಡಪ್ಪ ನವರ ಮಗನಾದ ಮನೋಹರ್ ಕೋಳಿ (22) ಆತ್ಮಹತ್ಯೆ ಮಾಡಿಕೊಂಡ ಯುವಕ ಎಂದು ತಿಳಿದು ಬಂದಿದೆ. ಕೌಟುಂಬಿಕ ಕಲಹದಿಂದ ಮನನೊಂದು ಗುರುವಾರ ರಾತ್ರಿ ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎನ್ನಲಾಗುತ್ತಿದೆ.