ಕರ್ನಾಟಕ

karnataka

ETV Bharat / state

ಕೊರೊನಾ ಭಯಕ್ಕೆ ಹೆದರಿ ಆತ್ಮಹತ್ಯೆಗೆ ಶರಣಾದ ಯುವಕನ ವರದಿ ನೆಗೆಟಿವ್​! - Bidar Quarantine Center

ಕೆಲ ದಿನಗಳ ಹಿಂದೆ ಮಹಾರಾಷ್ಟ್ರದಿಂದ ಆಗಮಿಸಿದ್ದ ಈತನ ಗೆಳೆಯನೊಬ್ಬನಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಈ ಹಿನ್ನೆಲೆ ಪರೀಕ್ಷೆಗಾಗಿ ಗಂಟಲು ದ್ರವ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿತ್ತು. ಬಳಿಕ ಖಿನ್ನತೆಗೆ ಒಳಗಾದ ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದ. ಇದೀಗ ವರದಿಯಲ್ಲಿ ನೆಗೆಟಿವ್ ಅಂತಾ ಬಂದಿದೆ.

young man who committed suicide in fear of corona Reported negative
ಕೊರೊನಾ ಭಯಕ್ಕೆ ಹೆದರಿ ಆತ್ಮಹತ್ಯೆ ಮಾಡಿಕೊಂಡ ಯುವಕನ ವರದಿ ನೆಗೆಟಿವ್​​

By

Published : Jun 20, 2020, 10:39 PM IST

ಬಸವಕಲ್ಯಾಣ (ಬೀದರ್​​): ಕೊರೊನಾ ಭಯದಿಂದ ಯುವಕನ್ನೊಬ್ಬ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ನಗರದ ತ್ರಿಪುರಾಂತದಲ್ಲಿ ನಡೆದಿದೆ.

26 ವರ್ಷದ ಯುವಕ ಆತ್ಮಹತ್ಯೆಗೆ ಶರಣಾಗಿದ್ದಾನೆ. ಕೆಲ ದಿನಗಳ ಹಿಂದೆ ಮಹಾರಾಷ್ಟ್ರದಿಂದ ಆಗಮಿಸಿದ್ದ ಈತನ ಗೆಳೆಯನೊಬ್ಬನಿಗೆ ಸೋಂಕು ಇರುವುದು ದೃಢಪಟ್ಟಿತ್ತು. ಗೆಳೆಯನೊಂದಿಗೆ ನೇರ ಸಂಪರ್ಕಕ್ಕೆ ಬಂದಿದ್ದ ಕಾರಣ ಈತನಿಗೂ ಕ್ವಾರಂಟೈನ್‌ನಲ್ಲಿ ಇರಿಸಿ, ಪರೀಕ್ಷೆಗಾಗಿ ಗಂಟಲು ದ್ರವ ಸಂಗ್ರಹಿಸಿ ಲ್ಯಾಬ್‌ಗೆ ಕಳುಹಿಸಲಾಗಿತ್ತು.

ಆದರೆ ತನಗೂ ಸೋಂಕು ತಗುಲುವ ಭಯದಿಂದ ಮಾನಸಿಕ ಖಿನ್ನತೆಗೆ ಒಳಗಾದ ಈತ ಶುಕ್ರವಾರ ರಾತ್ರಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ದುರ್ದೈವದ ಸಂಗತಿಯೆಂದರೆ ಯುವಕ ಮೃತಪಟ್ಟ ಮಾರನೇ ದಿವಸ ಅಂದರೆ ಇಂದು ಈತನ ವರದಿ ನೆಗೆಟಿವ್ ಬಂದಿದೆ ಎಂದು ಆರೋಗ್ಯ ಇಲಾಖೆ ಮೂಲಗಳು ದೃಢಪಡಿಸಿವೆ. ಈ ಕುರಿತು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details