ಬೀದರ್: ಕ್ಷುಲ್ಲಕ ಕಾರಣಕ್ಕಾಗಿ ನಡೆದ ಜಗಳ ಯುವಕನೊಬ್ಬನ ಕೊಲೆಯಲ್ಲಿ ಅಂತ್ಯವಾಗಿರುವ ಘಟನೆ ಜಿಲ್ಲೆಯ ಬಸವಕಲ್ಯಾಣದ ತ್ರಿಪುರಾಂತ ಬಳಿ ನಡೆದಿದೆ. ತ್ರಿಪುರಾಂತ ನಿವಾಸಿ ಆನಂದ ಫುಲೆ (26) ಮೃತ ಯುವಕ.
ತ್ರಿಪುರಾಂತ ಮುಖ್ಯ ರಸ್ತೆಯಲ್ಲಿ ಆನಂದ ಮತ್ತು ದಿಗಂಬರ ದಾಸೂರೆ ಸೇರಿ ಕೆಲ ಯುವಕರ ನಡುವೆ ಜಗಳ ನಡೆದಿದ್ದು, ಈ ವೇಳೆ ಆನಂದ ಮೇಲೆ ಎದುರಾಳಿ ಗುಂಪಿನ ವ್ಯಕ್ತಿಯೊಬ್ಬ ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿದ್ದಾನೆ. ಹಲ್ಲೆಯಿಂದ ಗಂಭೀರವಾಗಿ ಗಾಯಗೊಂಡಿದ್ದ ಆನಂದ ಫುಲೆಗೆ ನಗರದ ಸರ್ಕಾರಿ ಆಸ್ಪತ್ರೆಯಲ್ಲಿ ಪ್ರಥಮ ಚಿಕಿತ್ಸೆ ಕೊಡಿಸಿ ಹೆಚ್ಚಿನ ಚಿಕಿತ್ಸೆಗಾಗಿ ಉಮ್ಮರಗಾ ಆಸ್ಪತ್ರೆಗೆ ಸಾಗಿಸಲಾಗಿತ್ತು. ಆದರೆ ಮಾರ್ಗ ಮಧ್ಯೆಯೇ ಅವರು ಕೊನೆಯುಸಿರೆಳೆದಿದ್ದಾರೆ.