ಬೀದರ್ :ಯುವಕರು ಭಾರತೀಯ ಸೇನೆಯಲ್ಲಿ ಸೇರಿ ಉತ್ತಮ ಕಾರ್ಯನಿರ್ವಹಿಸುವ ಮೂಲಕ ದೇಶ ಮತ್ತು ನಮ್ಮ ಭಾಗಕ್ಕೆ ಹೆಸರು ತರಬೇಕೆಂದು ಜಿಲ್ಲಾಧಿಕಾರಿ ಗೋವಿಂದರೆಡ್ಡಿ ಹೇಳಿದರು. ಮಂಗಳವಾರ ಅಗ್ನಿಪಥ ಯೋಜನೆಯಡಿಯಲ್ಲಿ ಜಿಲ್ಲಾ ನೆಹರು ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಭಾರತೀಯ ಸೇನಾ ನೇಮಕಾತಿ ರ‍್ಯಾಲಿಯಲ್ಲಿ ಭಾಗವಹಿಸಿ ಮಾತನಾಡಿದರು.
ಈ ರ‍್ಯಾಲಿಯಲ್ಲಿ ಹೆಚ್ಚಿನ ಅಭ್ಯರ್ಥಿಗಳು ಅತಿ ಉತ್ಸಾಹದಿಂದ ಭಾಗವಹಿಸುವುದು ಕಂಡು ತುಂಬಾ ಸಂತೋಷವಾಗುತ್ತಿದೆ. ಇದರಲ್ಲಿ ಹೆಚ್ಚಿನ ಜನರು ಆಯ್ಕೆಯಾಗಬೇಕು ಯಾವುದೇ ಕಾರಣಕ್ಕೆ ತಾವು ಆತ್ಮವಿಶ್ವಾಸವನ್ನು ಕಳೆದುಕೊಳ್ಳದೆ ಆಯ್ಕೆಯ ಎಲ್ಲಾ ಹಂತಗಳಲ್ಲಿ ಉತ್ತೀರ್ಣರಾಗಬೇಕೆಂದು ಕಿವಿಮಾತು ಹೇಳಿದರು.
ಡಿಸೆಂಬರ್ 5 ರಿಂದ 22 ರವರೆಗೆ ನಡೆಯುತ್ತಿರುವ ಈ ಸೇನಾ ನೇಮಕಾತಿ ರ‍್ಯಾಲಿಯಲ್ಲಿ 70 ಸಾವಿರಕ್ಕೂ ಅಧಿಕ ಅಭ್ಯರ್ಥಿಗಳು ಭಾಗವಹಿಸಿದ್ದು, ಇದಕ್ಕೆ ಎಲ್ಲಾ ರೀತಿಯ ಸಹಕಾರವನ್ನು ಬೀದರ್ ಜಿಲ್ಲಾಡಳಿತ ಸೇನೆಯ ಅಧಿಕಾರಿಗಳಿಗೆ ನೀಡಿದೆ ಮತ್ತು ಹೆಚ್ಚಿನ ಸಂಖ್ಯೆಯಲ್ಲಿ ತಾವುಗಳು ಆಯ್ಕೆಯಾಗಬೇಕು ತಮಗೆಲ್ಲರಿಗೂ ಶುಭಾಶಯಗಳು ಎಂದು ಯುವನಜನತೆಗೆ ಜಿಲ್ಲಾಧಿಕಾರಿ ಹೇಳಿದರು.