ಕರ್ನಾಟಕ

karnataka

ETV Bharat / state

ಸಾಲಬಾಧೆ ತಾಳಲಾರದೆ ಯುವಕ ನೇಣಿಗೆ ಶರಣು - ಸಾಲದ ಹೊರೆ ತಾಳಲಾರದೆ ಯುವಕ ಸಾವು

ಸಾಲದ ಹೊರೆಯಿಂದ ಬೇಸತ್ತ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಬಟಗೇರಾ ಗ್ರಾಮದಲ್ಲಿ ನಡೆದಿದೆ.

ಸಾಲದ ಹೊರೆ ತಾಳಲಾರದೆ ಯುವಕ ಆತ್ಮಹತ್ಯೆ ಶರಣು
Youth committed suicide at Basavakalyan

By

Published : Jan 22, 2020, 10:34 PM IST

ಬಸವಕಲ್ಯಾಣ:ಸಾಲದ ಹೊರೆಯಿಂದ ಬೇಸತ್ತ ಯುವಕನೋರ್ವ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ಬಟಗೇರಾ ಗ್ರಾಮದಲ್ಲಿ ನಡೆದಿದೆ.

ಗ್ರಾಮದ ಮಹಬೂಬ್ ಪಠಾಣ(23) ಆತ್ಮಹತ್ಯೆಗೆ ಶರಣಾಗಿರುವ ಯುವಕ. ಗ್ರಾಮ ಸೇವಕನಾಗಿ ಕೆಲಸ ಮಾಡುತ್ತಿದ್ದ ಈತ ಸಾಲದಿಂದ ಬೇಸತ್ತು ಮನೆಯಲ್ಲಿಯೇ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ತಿಳಿದು ಬಂದಿದೆ. ಸ್ಥಳಕ್ಕೆ ಸಿಪಿಐ ಮಹೇಶ್​ ಗೌಡ ಪಾಟೀಲ್​, ಪಿಎಸ್‌ಐ ಬಸಲಿಂಗಪ್ಪ ಭೇಟಿ ನೀಡಿ ಪರಿಶೀಲಿಸಿದ್ದಾರೆ.

ಈ ಕುರಿತು ಮಂಠಾಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ABOUT THE AUTHOR

...view details