ಬೀದರ್ :ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರ ವ್ಯಾಪ್ತಿಯ ರೇಕುಳಗಿ ಗ್ರಾಮದ ಯುವಕರು ಮಾಜಿ ಸಚಿವ,ಜೆಡಿಎಸ್ ಶಾಸಕಾಂಗ ಪಕ್ಷದ ಉಪನಾಯಕ ಬಂಡೆಪ್ಪ ಕಾಶೆಂಪುರ್ ರವರ ಸಮ್ಮುಖದಲ್ಲಿ ಜೆಡಿಎಸ್ ಪಕ್ಷಕ್ಕೆ ಸೇರ್ಪಡೆಯಾದರು. ಕಾಶೆಂಪುರ್ ಪಿ ಗ್ರಾಮದ ಹೊರವಲಯದಲ್ಲಿರುವ ತಮ್ಮ ನಿವಾಸಕ್ಕೆ ಆಗಮಿಸಿದ ಯುವಕರಿಗೆ ಬಂಡೆಪ್ಪ ಕಾಶೆಂಪುರ್ ಅವರು ಜೆಡಿಎಸ್ ಪಕ್ಷದ ಧ್ವಜ ನೀಡುವ ಮೂಲಕ ಪಕ್ಷಕ್ಕೆ ಬರಮಾಡಿಕೊಂಡರು.
ಬಳಿಕ ಪಕ್ಷ ಸಂಘಟನೆ, ಬಲವರ್ಧನೆ, ಚುನಾವಣೆ ಸಿದ್ಧತೆ ಸೇರಿದಂತೆ ಅನೇಕ ವಿಷಯಗಳಿಗೆ ಸಂಬಂಧಿಸಿದಂತೆ ನೂತನ ಕಾರ್ಯಕರ್ತರೊಂದಿಗೆ ಸಭೆ ನಡೆಸಿದರು. ಈ ವೇಳೆ ಮಾತನಾಡಿದ ಶಾಸಕ ಬಂಡೆಪ್ಪ ಕಾಶೆಂಪುರ್ ಅವರು, ವಿವಿಧ ಪಕ್ಷಗಳ ಯುವಕರು ನಮ್ಮ ಪಕ್ಷಕ್ಕೆ ಸೇರ್ಪಡೆಯಾಗುತ್ತಿದ್ದಾರೆ. ಯುವಕರು ಜೆಡಿಎಸ್ ಮೇಲೆ ವಿಶ್ವಾಸ ಇರಿಸಿದ್ದಾರೆ. ನಮ್ಮ ಪಕ್ಷ ಬಡವರ, ರೈತರ, ಶ್ರಮಿಕರ ಪರವಾಗಿದೆ. ಮುಂದಿನ ಚುನಾವಣೆಯಲ್ಲಿ ಪಕ್ಷ ಸಂಘಟನೆ, ಬಲವರ್ಧನೆಗಾಗಿ ಶ್ರಮಿಸುವಂತೆ ಕಾರ್ಯಕರ್ತರಿಗೆ ಕರೆಕೊಟ್ಟರು.