ಬೆಂಗಳೂರು: ಹೊಸಪೇಟೆ ಶಾಸಕ ಆನಂದ್ ಸಿಂಗ್ಗೆ ಮತ್ತೊಂದು ಸಂಕಷ್ಟ ಎದುರಾಗಿದ್ದು, ಜನಪ್ರತಿನಿಧಿಗಳ ವಿಶೇಷ ನ್ಯಾಯಲಯ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸುವಂತೆ ಆದೇಶ ಹೊರಡಿಸಿದೆ.
ಶಾಸಕ ಆನಂದ್ ಸಿಂಗ್ಗೆ ಮತ್ತೊಂದು ಶಾಕ್ ಕೊಟ್ಟ ವಿಶೇಷ ಕೋರ್ಟ್ - ಆನಂದ್ ಸಿಂಗ್
2018ರ ವಿಧಾನ ಸಭೆ ಚುನಾವಣೆ ವೇಳೆ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಶಾಸಕ ಆನಂದ್ಸಿಂಗ್ಗೆ ಹೊಸಪೇಟೆ ಪೊಲೀಸರು ತನಿಖೆ ನಡೆಸಿ ನ್ಯಾಯಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ರು. ಪ್ರತಿನಿಧಿಗಳ ವಿಶೇಷ ಕೋರ್ಟ್ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸುವಂತೆ ಆದೇಶ ಹೊರಡಿಸಿದೆ.
ಶಾಸಕ ಆನಂದ್‌ಸಿಂಗ್ ಸಂಗ್ರಹ ಚಿತ್ರ
2018ರ ವಿಧಾನಸಭೆ ಚುನಾವಣೆ ವೇಳೆ ಆನಂದ್ ಸಿಂಗ್ ನೀತಿ ಸಂಹಿತೆ ಉಲ್ಲಂಘನೆ ಮಾಡಿದ್ದಾರೆಂದು ಹೊಸಪೇಟೆ ಟೌನ್ ಪೊಲೀಸ್ ಠಾಣೆಯಲ್ಲಿ ಕೇಸ್ ದಾಖಲಾಗಿತ್ತು. ನಂತರ ಹೊಸಪೇಟೆ ಪೊಲೀಸರು ತನಿಖೆ ನಡೆಸಿ ನ್ಯಾಯಲಯಕ್ಕೆ ದೋಷಾರೋಪ ಪಟ್ಟಿ ಸಲ್ಲಿಸಿದ್ರು. ಜನ ಪ್ರತಿನಿಧಿಗಳ ವಿಶೇಷ ಕೋರ್ಟ್ ವಿಚಾರಣೆ ನಡೆಸಿ, ಮೂರು ಬಾರಿ ವಿಚಾರಣೆಗೆ ಹಾಜರಾಗುವಂತೆ ಆನಂದ್ ಸಿಂಗ್ಗೆ ನೋಟಿಸ್ ನೀಡಲಾಗಿತ್ತು. ಆದ್ರೆ ವಿಚಾರಣೆಗೆ ಗೈರಾದ ಹಿನ್ನೆಲೆ ಜಾಮೀನು ರಹಿತ ವಾರೆಂಟ್ ಜಾರಿಗೊಳಿಸಿ ವಿಚಾರಣೆ ಮುಂದೂಡಿದೆ.