ಕರ್ನಾಟಕ

karnataka

ETV Bharat / state

ಆಕಸ್ಮಿಕ ಅಗ್ನಿಅವಘಡ : ಸುಟ್ಟು ಕರಕಲಾದ ಆಟೊ ಮೊಬೈಲ್​ ಶಾಪ್​ - undefined

ಆಕಸ್ಮಿಕ ಅಗ್ನಿಅವಘಡ ಸಂಭವಿಸಿದರ ಪರಿಣಾಮ ಗಾಯಿತ್ರಿ ಆಟೋ ಮೊಬೈಲ್​ ಅಂಗಡಿ ಸಂಪೂರ್ಣ ಭಸ್ಮವಾಗಿದ್ದು, ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಕೊಂಡಿರಬಹುದೆಂದು ಶಂಕಿಸಲಾಗಿದೆ.

ಆಕಸ್ಮಿಕ ಅಗ್ನಿಅವಘಡ

By

Published : Apr 29, 2019, 10:13 AM IST

ಬೆಂಗಳೂರು: ಆಟೊ ಮೊಬೈಲ್​ ಅಂಗಡಿಯಲ್ಲಿಆಕಸ್ಮಿಕ ಅಗ್ನಿಅವಘಡ ಸಂಭವಿಸಿದರ ಪರಿಣಾಮ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗೆ ಆಹುತಿಯಾಗಿರುವ ಘಟನೆ ಸುಬ್ರಮಣ್ಯನಗರದ ಮಿಲ್ಕ್ ಕಾಲೋನಿಯಲ್ಲಿ ಕಂಡುಬಂದಿದೆ.

ಸುಟ್ಟು ಕರಕಲಾದ ಆಟೋ ಮೊಬೈಲ್​ ಶಾಪ್​

ಗಾಯಿತ್ರಿ ಆಟೊ ಮೊಬೈಲ್​ ಅಂಗಡಿ ಸಂಪೂರ್ಣ ಭಸ್ಮವಾಗಿದ್ದು, ಮೇಲ್ನೋಟಕ್ಕೆ ಶಾರ್ಟ್ ಸರ್ಕ್ಯೂಟ್​ನಿಂದ ಬೆಂಕಿ ಕಾಣಿಕೊಂಡಿರಬಹುದೆಂದು ಶಂಕಿಸಲಾಗಿದೆ. ಬೆಂಕಿ ನಂದಿಸಲು ಅಗ್ನಿಶಾಮಕ ಸಿಬ್ಬಂದಿ ಮುಂದಾಗಿದ್ದು, 10ಕ್ಕೂ ಹೆಚ್ಚಿನ ಸಿಬ್ಬಂದಿ ಕಾರ್ಯನಿರತರಾಗಿದ್ದಾರೆ. ಸದ್ಯಕ್ಕೆ ಸುಬ್ರಮಣ್ಯನಗರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನು ಈ ಅವಘಡದಿಂದ ಲಕ್ಷಾಂತರ ರೂ. ಮೌಲ್ಯದ ವಸ್ತುಗಳು ಬೆಂಕಿಗಾಹುತಿಯಾದ್ದು, ಅಕ್ಕ ಪಕ್ಕದ ಕಟ್ಟಡಗಳಿಗೆ ಬೆಂಕಿ ತಗುಲದಂತೆ ಮುನ್ನೆಚ್ಚರಿಕೆ ಕ್ರಮಗಳನ್ನು ಕೈ ಗೊಳ್ಳಲಾಗಿದೆ.

For All Latest Updates

TAGGED:

ABOUT THE AUTHOR

...view details