ಬೆಂಗಳೂರು: ವಿಧಾನಸಭೆಯಲ್ಲಿ ವಿಶ್ವಾಸ ಮತ ಯಾಚನೆ ಹಿನ್ನಲೆಯಲ್ಲಿ ವಿಧಾನ ಪರಿಷತ್ ಕಲಾಪವನ್ನು ಮಧ್ಯಾಹ್ನ 3.30ಕ್ಕೆ ಮುಂದೂಡಲಾಗಿದೆ.
ವಿಧಾನ ಪರಿಷತ್ ಕಲಾಪ ಮಧ್ಯಾಹ್ನಕ್ಕೆ ಮುಂದೂಡಿಕೆ - ಸಭಾಪತಿಗಳು,
ವಿಧಾನಸಭೆಯಲ್ಲಿ ಸಿಎಂ ಕುಮಾರಸ್ವಾಮಿ ವಿಶ್ವಾಸ ಮತಯಾಚನೆ ಹಿನ್ನೆಲೆ ವಿಧಾನ ಪರಿಷತ್ ಕಲಾಪವನ್ನು ಸಭಾಪತಿಗಳು ಮಧ್ಯಾಹ್ನ 3.30ಕ್ಕೆ ಮುಂದೂಡಿಕೆ ಮಾಡಿದರು.
ಬೆಳಗಿನ ಕಲಾಪ ಆರಂಭಗೊಳ್ಳುತ್ತಿದ್ದಂತೆ ಬಿಜೆಪಿ ಸದಸ್ಯರು ಸದನದ ಬಾವಿಗಿಳಿದು ಪ್ರತಿಭಟನೆ ನಡೆಸಿದರು. ಅಲ್ಪಮತದ ಸರ್ಕಾರ ರಾಜೀನಾಮೆ ನೀಡಲಿ ಎಂದು ಭಿತ್ತಿ ಪತ್ರ ಪ್ರದರ್ಶಿಸಿ, ಧರಣಿ ನಡೆಸಿದರು. ಈ ವೇಳೆ ಆಡಳಿತ ಪಕ್ಷದ ಸದಸ್ಯರು ಬಿಜೆಪಿ ವಿರುದ್ಧ ವಾಗ್ದಾಳಿ ನಡೆಸಿದರು.
ಗದ್ದಲದ ನಡುವೆ ಪ್ರಶ್ನೋತ್ತರ ಕಲಾಪನ್ನು ಕೈಗೆತ್ತಿಕೊಳ್ಳದ ಸಭಾಪತಿಗಳು, ವಿಧಾನಸಭೆಯಲ್ಲಿ ವಿಶ್ವಾಸ ಮತ ಮಂಡಿಸಲಾಗುತ್ತಿದೆ. ಹೀಗಾಗಿ ಪರಿಷತ್ಗೆ ಸಚಿವರು ಯಾರೂ ಬರುವುದಿಲ್ಲ. ಈ ಹಿನ್ನಲೆಯಲ್ಲಿ ಕಲಾಪವನ್ನು ಮಧ್ಯಾಹ್ನ 3.30ಕ್ಕೆ ಮುಂದೂಡಿಕೆ ಮಾಡುತ್ತಿರುವುದಾಗಿ ಪ್ರಕಟಿಸಿ ಕಲಾಪ ಮುಂದೂಡಿಕೆ ಮಾಡಿದರು.