ಬೆಂಗಳೂರು: ಯಲಹಂಕದಲ್ಲಿ ಏರ್ ಶೋನಲ್ಲಿ ಸಂಭಿವಿಸಿದ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.
ವೈಮಾನಿಕ ಪ್ರದರ್ಶನ ಬೆಂಕಿ ಅನಾಹುತಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ? - undefined
ಯಲಹಂಕದಲ್ಲಿ ಏರ್ ಶೋನಲ್ಲಿ ಸಂಭಿವಿಸಿದ ಬೆಂಕಿ ಅವಘಡಕ್ಕೆ ಶಾರ್ಟ್ ಸರ್ಕ್ಯೂಟ್ ಕಾರಣ ಇರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದು, ಸದ್ಯ ಪೊಲೀಸರು ಪಾರ್ಕಿಂಗ್ ಲಾಟ್ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.
ಬೆಂಕಿ ಅನಾಹುತ
ಶಾರ್ಟ್ ಸರ್ಕ್ಯೂಟ್ನಿಂದ ಬೆಂಕಿ ಹತ್ತಿಕೊಂಡಿದ್ದು, ನಂತರ ಅದು ಹುಲ್ಲಿಗೆ ತಗಲಿರಬಹುದೆಂಬ ಅನುಮಾನ ವ್ಯಕ್ತಪಡಿಸಿದ್ದಾರೆ.ಪಾರ್ಕಿಂಗ್ ಲಾಟ್ನಲ್ಲಿ ಒಣ ಹುಲ್ಲು ಹೆಚ್ಚಾಗಿದ್ದಿದ್ದರಿಂದ ಬೆಂಕಿಯ ಪ್ರಮಾಣ ಕೂಡ ಹೆಚ್ಚಾಗಿದೆ ಎನ್ನಲಾಗುತ್ತಿದೆ.
ಘಟನೆ ಸಂಬಂಧ ಈಗಾಗಲೇ ಯಲಹಂಕ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ತನಿಖೆ ಚುರುಕುಗೊಳಿಸಿದ್ದಾರೆ. ಸದ್ಯ ಪೊಲೀಸರು ಪಾರ್ಕಿಂಗ್ ಲಾಟ್ ಸುತ್ತಮುತ್ತಲಿನ ಸಿಸಿಟಿವಿ ಪರಿಶೀಲನೆ ನಡೆಸುತ್ತಿದ್ದಾರೆ.