ಬೆಂಗಳೂರು: ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಟಿ ಸಿವಿಲ್ ಕೋರ್ಟ್ ಜನಪ್ರತಿನಿಧಿಗಳ ನ್ಯಾಯಲಯಕ್ಕೆ ಸಲ್ಲಿಸಿದ್ದ ನಿರೀಕ್ಷಣಾ ಜಾಮೀನು ಅರ್ಜಿಯನ್ನ ಕಂಪ್ಲಿ ಶಾಸಕ ಗಣೇಶ್ ವಾಪಸ್ಸು ಪಡೆದಿದ್ದಾರೆ.
ಆನಂದ್ ಸಿಂಗ್ ಮೇಲೆ ಹಲ್ಲೆ ಪ್ರಕರಣ... ನಿರೀಕ್ಷಣಾ ಜಾಮೀನು ಅರ್ಜಿ ಹಿಂಪಡೆದ ಕಂಪ್ಲಿ ಶಾಸಕ - ಕಂಪ್ಲಿ ಶಾಸಕ
ಕಂಪ್ಲಿ ಶಾಸಕ ಗಣೇಶ್ ನಿನ್ನೆ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಇಂದು ಹಿಂಪಡೆದಿದ್ದಾರೆ.
ಸದ್ಯ ಬಂಧನದ ಭೀತಿಯಿಂದ ತಲೆಮರೆಯಿಸಿಕೊಂಡಿರುವ ಗಣೇಶ್ ನಿರೀಕ್ಷಣಾ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಹಿಂಪಡೆದಿದ್ದಾರೆ. ಆನಂದ್ ಸಿಂಗ್ ಅವರನ್ನು ಅರ್ಜಿಯಲ್ಲಿ ಪ್ರತಿವಾದಿಯಾಗಿ ಮಾಡಿದ್ದ ಹಿನ್ನೆಲೆಯಲ್ಲಿ ಅರ್ಜಿ ಹಿಂಪಡೆಯಲಾಗಿದೆ.
ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದ ವಿಚಾರ ಕುರಿತು ಸಿಟಿ ಸಿವಿಲ್ ಕೋರ್ಟ್ ಜನಪ್ರತಿನಿಧಿಗಳ ನ್ಯಾಯಲಯದಲ್ಲಿ ವಿಚಾರಣೆ ನಡೆದಿತ್ತು. ಈ ವೇಳೆ ನಿರೀಕ್ಷಣಾ ಜಾಮೀನಿಗೆ ಆಕ್ಷೇಪಣೆ ಸಲ್ಲಿಸಲು ಸರ್ಕಾರದ ಅಭಿಯೋಜಕರು ಕಾಲಾವಕಾಶ ಕೋರಿದ ಹಿನ್ನೆಲೆ ಫೆ. 25 ರಂದು ಆಕ್ಷೇಪಣೆ ಸಲ್ಲಿಸುವುದಕ್ಕೆ ಸಮಯವಕಾಶ ನೀಡಿ ಜನಪ್ರತಿನಿಧಿಗಳ ನ್ಯಾಯಾಲಯದ ನ್ಯಾಯಮೂರ್ತಿ ಬಿ.ವಿ.ಪಾಟೀಲ್ ವಿಚಾರಣೆ ಮೂಂದುಡಿಕೆ ಮಾಡಿದ್ರು. ಆದ್ರೆ ಇದೀಗ ಅರ್ಜಿಯನ್ನು ಗಣೇಶ್ ವಾಪಸ್ಸು ಪಡೆದಿದ್ದಾರೆ.