ಬೆಂಗಳೂರು: ಆಡಿಯೋ ಸಿಡಿ ವಿವಾದದಲ್ಲಿ ಸಿಲುಕಿರುವ ಬಿಜೆಪಿ ವಿಧಾನಸಭೆ ಕಲಾಪದಲ್ಲಿ ಸಿಎಂ ವಿರುದ್ಧ ಹೊಸ ಅಸ್ತ್ರ ಪ್ರಯೋಗಿಸಲು ಸಜ್ಜಾಗಿದೆ. ಮುಖ್ಯಮಂತ್ರಿಗಳ ಗೇಮ್ ಪ್ಲಾನ್ಗೆ ಕೌಂಟರ್ ನೀಡಲು ಕೇಸರಿ ಪಡೆ ತಂತ್ರ ರೂಪಿಸಿದೆ ಎನ್ನಲಾಗಿದೆ.
ಹೌದು, ಸ್ಪೀಕರ್ ರಮೇಶ್ ಕುಮಾರ್ ವಿರುದ್ಧ ಈ ಹಿಂದೆ ಕುಮಾರಸ್ವಾಮಿ ಮಾಡಿರೋ ಆರೋಪಗಳನ್ನ ಪ್ರಸ್ತಾಪಿಸಲು ಬಿಜೆಪಿ ನಿರ್ಧರಿಸಿದೆ. ಈ ಮೂಲಕ ಸಿಎಂ ಹೆಚ್ಡಿಕೆಯನ್ನು ಇಕ್ಕಟ್ಟಿಗೆ ಸಿಲುಕಿಸಲು ಮುಂದಾಗಿದೆ ಎಂದು ಬಿಜೆಪಿ ಆಪ್ತ ಮೂಲಗಳಿಂದ ತಿಳಿದುಬಂದಿದೆ.
2013 ರ ಚುನಾವಣಾ ಪ್ರಚಾರ ಸಂದರ್ಭದಲ್ಲಿ ರಮೇಶ್ ಕುಮಾರ್ ವಿರುದ್ಧ ಕುಮಾರಸ್ವಾಮಿ 48 ಎಕರೆ ಅರಣ್ಯ ಭೂಮಿ ಭೂ ಕಬಳಿಕೆ ಆರೋಪ ಮಾಡಿ, ಸಮಯ ಬಂದಾಗ ದಾಖಲೆ ಬಿಡುಗಡೆ ಮಾಡೋದಾಗಿ ಹೇಳಿದ್ದರು.
ಆಗ ಹೆಚ್ಚು ಚರ್ಚೆಯಾಗಿದ್ದ ಈ ಸುದ್ದಿಯನ್ನು ಇದೀಗ ಮತ್ತೊಮ್ಮೆ ಪ್ರಸ್ತಾಪಿಸಿ ಸಿಎಂ ವಿರುದ್ಧ ತಿರುಗಿ ಬೀಳಲು ಬಿಜೆಪಿ ತಂತ್ರ ರೂಪಿಸುತ್ತಿದೆ. ಈ ಹಿಂದೆ ರಮೇಶ್ ಕುಮಾರ್ ವಿರುದ್ಧ ಮಾಡಿದ್ದ ಆರೋಪಗಳನ್ನೇ ಸಿಎಂ ವಿರುದ್ಧ ಅಸ್ತ್ರವಾಗಿಸಿಕೊಂಡು ಸ್ಪೀಕರ್ ಹಾಗೂ ಸಿಎಂ ಇಬ್ಬರನ್ನೂ ಇಕ್ಕಟ್ಟಿಗೆ ಸಿಲುಕಿಸಲು ಮಾಸ್ಟರ್ ಪ್ಲಾನ್ ರೂಪಿಸಲಾಗಿದೆ ಎಂದು ತಿಳಿದುಬಂದಿದೆ.