ಕರ್ನಾಟಕ

karnataka

ETV Bharat / state

ದತ್ತಿ ಇಲಾಖೆ ದೇಗುಲಗಳ ಅಭಿವೃದ್ದಿಗೆ ಸೂಚನೆ: ಅಧಿಕಾರಿಗಳೊಂದಿಗೆ ಸಿಎಂ ಸಭೆ - ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ

ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಯ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ, ಅಧಿಕಾರಿಗಳ ಜೊತೆ ಸಭೆ ನಡೆಸಿದರು.

ಮುಖ್ಯಮಂತ್ರಿಗಳಿಂದ ಧಾರ್ಮಿಕ ದತ್ತಿ ಇಲಾಖೆಗೆ ಸೂಚನೆ

By

Published : Jun 8, 2019, 4:08 PM IST

ಬೆಂಗಳೂರು : ಧಾರ್ಮಿಕ ದತ್ತಿ ಇಲಾಖೆ ವ್ಯಾಪ್ತಿಗೆ ಸೇರಿದ ಧಾರ್ಮಿಕ ಕ್ಷೇತ್ರಗಳ ಅಭಿವೃದ್ಧಿ ಕಾರ್ಯಗಳಿಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಹೆಚ್. ಡಿ.ಕುಮಾರಸ್ವಾಮಿ ಅಧ್ಯಕ್ಷತೆಯಲ್ಲಿ ಸಭೆ ನಡೆಯಿತು.

ಸಭೆಯಲ್ಲಿ ರಾಜ್ಯದ ಐತಿಹಾಸಿಕ ಹಾಗೂ ಪಾರಂಪರಿಕ ದೇಗುಲಗಳ ಮೂಲಭೂತ ಸೌಲಭ್ಯಗಳನ್ನು ಅಭಿವೃದ್ಧಿಪಡಿಸಲು ಸಿಎಂ ಕೆಲವು ಸೂಚನೆಗಳನ್ನು ನೀಡಿದರು.

ಇತಿಹಾಸ ಪ್ರಸಿದ್ಧ ಕೆಂಗಲ್ ಆಂಜನೇಯ ಸ್ವಾಮಿ ದೇವಸ್ಥಾನದ ಸಮಗ್ರ ಅಭಿವೃದ್ಧಿಗೆ 21 ಕೋಟಿ ರೂ. ಗಳ ಪ್ರಸ್ತಾವನೆ ಸಲ್ಲಿಸುವುದು. ಟಿ.ಟಿ.ಡಿ ಟ್ರಸ್ಟ್ ವತಿಯಿಂದ ರಾಮನಗರ ಜಿಲ್ಲೆಯಲ್ಲಿ ವೆಂಕಟೇಶ್ವರ ದೇವಸ್ಥಾನ ಹಾಗೂ ಸಮುದಾಯದ ಭವನ ನಿರ್ಮಾಣಕ್ಕೆ 15 ಎಕರೆ ಜಮೀನು ಗುರುತಿಸುವುದು, ಲೋಕೋಪಯೋಗಿ ಇಲಾಖೆ ವತಿಯಿಂದ ಮಲೆಮಹದೇಶ್ವರ ಬೆಟ್ಟದಲ್ಲಿ ರಸ್ತೆ ಅಭಿವೃದ್ಧಿ ಕಾರ್ಯವನ್ನು 40 ಕೋಟಿ ರೂ. ವೆಚ್ಚದಲ್ಲಿ ಕೈಗೊಳ್ಳಲು ಹಾಗೂ ದೇವಸ್ಥಾನದ ಮೆಟ್ಟಿಲುಗಳ ದುರಸ್ತಿ ಕಾರ್ಯವನ್ನು ಮಲೆ ಮಹದೇಶ್ವರ ಪ್ರಾಧಿಕಾರದ ವತಿಯಿಂದ ಕೈಗೊಳ್ಳುವುದು. ಮುಡುಕುತೊರೆ ಶ್ರೀ ಮಲ್ಲಿಕಾರ್ಜುನ ದೇವಸ್ಥಾನದ ಜೀರ್ಣೋದ್ಧಾರಕ್ಕೆ ಹಾಗೂ ಸಮಗ್ರ ಅಭಿವೃದ್ಧಿಗೆ ಪ್ರಸ್ತಾವನೆ ಸಲ್ಲಿಸುವ ವಿಚಾರಗಳು ಸಭೆಯಲ್ಲಿ ಪ್ರಸ್ತಾಪವಾಗಿವೆ.

ತಿರುಮಲ ತಿರುಪತಿಯಲ್ಲಿ ರಾಜ್ಯ ಸರ್ಕಾರದ ವತಿಯಿಂದ 26 ಕೋಟಿ ರೂ. ವೆಚ್ಚದಲ್ಲಿ ಛತ್ರ ನಿರ್ಮಾಣ ಕಾರ್ಯವನ್ನು ಕೈಗೊಳ್ಳುವುದು. ಮುಂದಿನ ವರ್ಷದಲ್ಲಿ ತಲಕಾಡು ಪಂಚಲಿಂಗದರ್ಶನ ಆಚರಣೆ ನಡೆಯಲಿರುವುದರಿಂದ, ಕ್ಷೇತ್ರದಲ್ಲಿನ ಮೂಲಭೂತ ಸೌಕರ್ಯಗಳ ವ್ಯವಸ್ಥೆಯನ್ನು ಬಲಪಡಿಸಲು ಮತ್ತು ಅವಶ್ಯವಿರುವೆಡೆ ಸೌಲಭ್ಯವನ್ನು ನಿರ್ಮಿಸಲು ಸೂಚನೆಗಳನ್ನು ಮುಖ್ಯಮಂತ್ರಿಗಳು ಸಂಬಂಧಿಸಿದ ಜಿಲ್ಲಾಧಿಕಾರಿಗಳಿಗೆ ನೀಡಿದರು.

ಸಭೆಯಲ್ಲಿ ಲೋಕೋಪಯೋಗಿ ಸಚಿವ ಹೆಚ್.ಡಿ.ರೇವಣ್ಣ, ಮುಜರಾಯಿ ಇಲಾಖೆ ಸಚಿವ ಪರಮೇಶ್ವರ್ ನಾಯಕ್, ಸಂಬಂಧಪಟ್ಟ ಜಿಲ್ಲಾಧಿಕಾರಿಗಳು ಹಾಗೂ ಕಂದಾಯ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ABOUT THE AUTHOR

...view details