ಬೆಂಗಳೂರು: ರಾಜೀನಾಮೆ ಕೊಟ್ಟ ಅತೃಪ್ತ ಶಾಸಕರ ಮನವೊಲಿಸಲು ಕಾಂಗ್ರೆಸ್ನ ಟ್ರಬಲ್ ಶೂಟರ್, ಸಚಿವ ಡಿ.ಕೆ.ಶಿವಕುಮಾರ್ ನಿರಂತರ ಪ್ರಯತ್ನ ಮಾಡುತ್ತಿದ್ದಾರೆ. ಓನ್ ಮ್ಯಾನ್ ಆರ್ಮಿಯಂತೆ ಫೀಲ್ಡ್ಗಿಳಿದ ಡಿ.ಕೆ.ಶಿವಕುಮಾರ್ ಒಬ್ಬರೇ ರಾತ್ರಿ ವೇಳೆ ರಾಜೀನಾಮೆ ಕೊಟ್ಟ ಶಾಸಕರ ಮನೆಗಳಿಗೆ ಭೇಟಿ ಕೊಟ್ಟು ಮನವೊಲಿಕೆ ಯತ್ನ ನಡೆಸಿದ್ದಾರೆ.
ಎಂಟಿಬಿ ನಾಗರಾಜ್ ಮನವೊಲಿಕೆಗೆ ಫೀಲ್ಡಿಗಿಳಿದ ಕಾಂಗ್ರೆಸ್ ನಾಯಕರು - ಎಂಟಿಬಿ ನಾಗರಾಜ್ ಮನವೊಲಿಕೆಗೆ ಫೀಲ್ಡಿಗಿಳಿದ ಕಾಂಗ್ರೆಸ್ ನಾಯಕರು
ಎರಡು ದಿನಗಳ ಹಿಂದಷ್ಟೇ ಶಾಸಕ ಎಸ್.ಟಿ.ಸೋಮಶೇಖರ್ ಮನೆಗೆ ಮಧ್ಯರಾತ್ರಿ ಭೇಟಿ ನೀಡಿದ್ದ ಡಿಕೆಶಿ, ಸೋಮಶೇಖರ್ಗಾಗಿ ಕಾದು ಕುಳಿತಿದ್ದರು. ಇದೀಗ ಎಂಟಿಬಿ ನಾಗರಾಜ್ ಮನವೊಲಿಸಲು ಯತ್ನಿಸುತ್ತಿರುವ ಕಾಂಗ್ರೆಸ್ ನಾಯಕರು, ಬೆಳ್ಳಂಬೆಳಗ್ಗೆಯೇ ಸಚಿವ ಎಂಟಿಬಿ ನಾಗರಾಜ್ ಮನೆಗೆ ದೌಡಾಯಿಸಿದ್ದಾರೆ.
ರಾಜೀನಾಮೆ ವಾಪಸ್ ಪಡೆದು ಮೈತ್ರಿ ಸರ್ಕಾರ ಬೆಂಬಲಿಸುವಂತೆ ಮನವಿ ಮಾಡುತ್ತಿದ್ದಾರೆ. ಎರಡು ದಿನಗಳ ಹಿಂದಷ್ಟೇ ಶಾಸಕ ಎಸ್.ಟಿ.ಸೋಮಶೇಖರ್ ಮನೆಗೆ ಮಧ್ಯರಾತ್ರಿ ಭೇಟಿ ನೀಡಿದ್ದ ಡಿಕೆಶಿ, ಸೋಮಶೇಖರ್ಗಾಗಿ ಕಾದು ಕುಳಿತಿದ್ದರು. ಇದೀಗ ಎಂಟಿಬಿ ನಾಗರಾಜ್ ಮನವೊಲಿಸಲು ಯತ್ನಿಸುತ್ತಿರುವ ಡಿಕೆಶಿ, ಬೆಳ್ಳಂಬೆಳಗ್ಗೆಯೇ ಸಚಿವ ಎಂಟಿಬಿ ನಾಗರಾಜ್ ಮನೆಗೆ ದೌಡಾಯಿಸಿದ್ದಾರೆ.
ಗರುಡಾಚಾರ್ ಪಾಳ್ಯದಲ್ಲಿರುವ ಎಂಟಿಬಿ ನಾಗರಾಜ್ ಮನೆಗೆ ಬೆಳಗಿನ ಜಾವ 5 ಗಂಟೆಗೆ ಆಗಮಿಸಿದ ಡಿ.ಕೆ.ಶಿವಕುಮಾರ್, ಎಂಟಿಬಿ ನಿವಾಸದಲ್ಲೇ ಮೊಕ್ಕಾಂ ಹೂಡಿ ಅವರ ಮನವೊಲಿಕೆಗೆ ಯತ್ನಿಸುತ್ತಿದ್ದಾರೆ. ಇತ್ತ ಡಿಕೆಶಿ ಭೇಟಿ ಬೆನ್ನಲ್ಲೇ ಎಂಟಿಬಿ ನಾಗರಾಜ್ ಮನೆಗೆ ಡಿಸಿಎಂ ಪರಮೇಶ್ವರ್, ಸಚಿವ ಕೃಷ್ಣಬೈರೇಗೌಡ, ಎಂಎಲ್ಸಿ ರಿಜ್ವಾನ್ ಅರ್ಷದ್ ಕೂಡ ಆಗಮಿಸಿದ್ದು, ರಾಜೀನಾಮೆ ವಾಪಸ್ ಪಡೆಯುವಂತೆ ಮನವೊಲಿಸುತ್ತಿದ್ದಾರೆ. ಸರ್ಕಾರದ ವಿಶ್ವಾಸಮತ ಯಾಚನೆ ವೇಳೆ ಬೆಂಬಲಿಸುವಂತೆಯೂ ಮನವಿ ಮಾಡುತ್ತಿದ್ದಾರೆ. ಆದರೆ ಯಾವುದೇ ಕಾರಣಕ್ಕೂ ರಾಜೀನಾಮೆ ವಾಪಸ್ ಪಡೆಯುವುದಿಲ್ಲ ಎಂದು ಪಟ್ಟು ಹಿಡಿದಿರುವ ನಾಗರಾಜ್, ರಾಜೀನಾಮೆ ಕೊಟ್ಟು ರಾಜಕೀಯ ನಿವೃತ್ತಿ ಪಡೆಯಲು ಚಿಂತಿಸಿದ್ದಾರೆ ಎನ್ನಲಾಗಿದೆ.