ಕರ್ನಾಟಕ

karnataka

ETV Bharat / state

ಹೆಚ್​ಡಿಡಿ ಭೇಟಿಯಾದ ದಿನೇಶ್​ ಗುಂಡೂರಾವ್: ಹಲವು ವಿಚಾರಗಳ ಬಗ್ಗೆ ಮಹತ್ವದ ಚರ್ಚೆ - undefined

ಇಂದು ಕೆಪಿಸಿಸಿ ಅಧ್ಯಕ್ಷ ದಿನೇಶ್ ಗುಂಡೂರಾವ್ ಅವರು ಜೆಡಿಎಸ್​ ವರಿಷ್ಠ ದೇವೇಗೌಡರನ್ನು ಭೇಟಿ ಮಾಡಿ ಹಲವು ವಿಚಾರಗಳ ಬಗ್ಗೆ ಚರ್ಚೆ ನಡೆಸಿದ್ದಾರೆ. ಇನ್ನು ಆಪರೇಷನ್​ ಕಮಲದಿಂದ ಮೈತ್ರಿ ಸರ್ಕಾರಕ್ಕೆ ಯಾವುದೇ ಅಭದ್ರತೆ ಇಲ್ಲವೆಂದು ದಿನೇಶ್​ ಸ್ಪಷ್ಟಪಡಿಸಿದ್ದಾರೆ.

ಎಚ್​ಡಿಡಿ ಭೇಟಿ ಮಾಡಿದ ಗುಂಡೂರಾವ್

By

Published : May 27, 2019, 5:35 PM IST

ಬೆಂಗಳೂರು: ಪ್ರಸ್ತುತ ರಾಜ್ಯ ರಾಜಕೀಯ ಬೆಳವಣಿಗೆಗಳ ಬಗ್ಗೆ ಹಲವು ವಿಚಾರಗಳಿಗೆ ಸಂಬಂಧಿಸಿದಂತೆ ದೇವೇಗೌಡರೊಂದಿಗೆ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಚರ್ಚೆ ನಡೆಸಿದರು.

ಹೆಚ್​ಡಿಡಿ ಭೇಟಿ ಮಾಡಿದ ದಿನೇಶ್​ ಗುಂಡೂರಾವ್

ಪದ್ಮನಾಭ ನಗರದಲ್ಲಿ ಜೆಡಿಎಸ್​ ವರಿಷ್ಠ ಹೆಚ್.ಡಿ ದೇವೇಗೌಡರನ್ನು ಭೇಟಿಯಾದ ಬಳಿಕ ಮಾತನಾಡಿದ ಅವರು, ಪಕ್ಷದ ಬಗ್ಗೆ ಕೆಲವೊಂದಿಷ್ಟು ವಿಚಾರಗಳನ್ನು ಮಾತನಾಡಬೇಕಾಗಿತ್ತು. ಹಲವಾರು ಮಹತ್ವದ ವಿಚಾರಗಳ ಕುರಿತು ಚರ್ಚಿಸಿದ್ದೇವೆ. ಆದರೆ ಏನು ಮಾತನಾಡಿದ್ದೇವೆ ಅನ್ನೋದನ್ನು ಬಹರಿಂಗಪಡಿಸಲ್ಲ ಎಂದು ದಿನೇಶ್​ ಗುಂಡೂರಾವ್​ ತಿಳಿಸಿದರು.

ದೇವೇಗೌಡರು ಕೆಲವೊಂದಿಷ್ಟು ವಿಚಾರಗಳ ಬಗ್ಗೆ ನಮ್ಮ ಮುಂದೆ ಸ್ಪಷ್ಟವಾದ ಮಾತುಗಳ್ನನಾಡಿದ್ದಾರೆ. ಆ ಬಗ್ಗೆ ನಮ್ಮ ಪಕ್ಷದ ವರಿಷ್ಠರ ಜೊತೆ ಮಾತುಕತೆ ನಡೆಸಿ ನಿರ್ಧಾರ ಕೈಗೊಳ್ಳುತ್ತೇವೆ ಎಂದು ದಿನೇಶ್​ ಸ್ಪಷ್ಟಪಡಿಸಿದರು.

ಇನ್ನು, ಆಪರೇಷನ್ ಕಮಲ ವಿಚಾರವಾಗಿ ಪ್ರತಿಕ್ರಿಯಿಸಿದ ಕೆಪಿಸಿಸಿ ಅಧ್ಯಕ್ಷರು, ಸರ್ಕಾರಕ್ಕೆ ಯಾವುದೇ ಅಭದ್ರತೆ ಇಲ್ಲ. ಸಚಿವ ಸಂಪುಟದ ಪುನಾರಚನೆ ವಿಚಾರದ ಬಗ್ಗೆ ಏನೂ ಮಾತಾಡುವುದಿಲ್ಲ. ಸ್ಪಷ್ಟ ತೀರ್ಮಾನಕ್ಕೆ ಬಂದ ನಂತರವೇ ಎಲ್ಲವನ್ನು ತಿಳಿಸುತ್ತೇವೆ ಎಂದರು.

For All Latest Updates

TAGGED:

ABOUT THE AUTHOR

...view details