ಕರ್ನಾಟಕ

karnataka

ETV Bharat / state

ವಿಧಾನ ಪರಿಷತ್ ಮಾಜಿ ಸದಸ್ಯ ಎಸ್.ಎಂ. ಶಂಕರ್ ನಿಧನಕ್ಕೆ ಡಿಕೆಶಿ, ಬಿಎಸ್​ವೈ ಸಂತಾಪ - undefined

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಎಸ್.ಎಂ. ಶಂಕರ್ ಬಹು ಅಂಗಾಂಗ ವೈಫಲ್ಯ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದು, ಇವರ ಅಗಲಿಕೆಗೆ ಕಾಂಗ್ರೆಸ್ ಮತ್ತು ಬಿಜೆಪಿ ಗಣ್ಯರು ಸಂತಾಪ ಸೂಚಿಸಿದ್ದಾರೆ.

ಡಿಕೆಶಿ, ಬಿಎಸ್​ವೈ ಸಂತಾಪ

By

Published : Jun 22, 2019, 12:04 PM IST

ಬೆಂಗಳೂರು: ವಿಧಾನ ಪರಿಷತ್ ಮಾಜಿ ಸದಸ್ಯ, ಕಾಂಗ್ರೆಸ್ ನಾಯಕ, ಪ್ರಗತಿಪರ ರೈತ, ಮಾಜಿ ಸಿಎಂ ಎಸ್.ಎಂ ಕೃಷ್ಣ ಅವರ ಸಹೋದರ ಎಸ್.ಎಂ ಶಂಕರ್ ನಿಧನಕ್ಕೆ ಗಣ್ಯರು ಸಂತಾಪ ಸೂಚಿಸಿದ್ದಾರೆ.

ವಯೋ ಸಹಜ ಕಾಯಿಲೆಯಿಂದ ಬಳಲುತ್ತಿದ್ದ ಶಂಕರ್, ಬಹು ಅಂಗಾಂಗ ವೈಫಲ್ಯ ಚಿಕಿತ್ಸೆಗಾಗಿ ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ಇಂದು ನಿಧನರಾಗಿದ್ದಾರೆ. ಎಸ್‍.ಎಂ ಕೃಷ್ಣ ಅವರ ಸ್ವಂತ ಸಹೋದರರಾಗಿದ್ದ ಶಂಕರ್​ ಅವರು, ಕೃಷ್ಣ ಸಿಎಂ ಆಗಿದ್ದ ಸಂದರ್ಭದಲ್ಲಿ ಕಾಂಗ್ರೆಸ್‍ನಿಂದ ವಿಧಾನ ಪರಿಷತ್‍ಗೆ ಆಯ್ಕೆಯಾಗಿದ್ದರು. ಇವರ ಅಗಲಿಕೆಗೆ ಸಂತಾಪ ಸೂಚಿಸಿರುವ ಗಣ್ಯರು, ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ದೇವರು ಕೊಡಲಿ ಎಂದು ಆಶಿಸಿದ್ದಾರೆ.

ಕಂಬನಿ ಮಿಡಿದ ಡಿಕೆಶಿ:

ಎಸ್‍.ಎಂ ಶಂಕರ್ ನಿಧನಕ್ಕೆ ಜಲಸಂಪನ್ಮೂಲ, ಕನ್ನಡ ಮತ್ತು ಸಂಸ್ಕೃತಿ ಸಚಿವ ಡಿ.ಕೆ ಶಿವಕುಮಾರ್ ಸಂತಾಪ ವ್ಯಕ್ತಪಡಿಸಿದ್ದಾರೆ. ನನ್ನ ರಾಜಕೀಯ ಆರಂಭಿಕ ದಿನಗಳಲ್ಲಿ ಮಾರ್ಗದರ್ಶನ ನೀಡಿದ್ದ ಪ್ರಮುಖರಲ್ಲಿ ಒಬ್ಬರಾದ ಎಸ್.ಎಂ ಶಂಕರ್ ಅವರು ವಿಧಿವಶರಾಗಿದ್ದಾರೆ ಎಂಬ ಸುದ್ದಿ ಕೇಳಿ ಆಘಾತವಾಗಿದೆ. ನನ್ನ ರಾಜಕೀಯ ಗುರುಗಳಾದ ಎಸ್.ಎಂ ಕೃಷ್ಣ ಅವರ ಸಹೋದರರಾದ ಶಂಕರ್ ಅವರ ಸರಳ ವ್ಯಕ್ತಿತ್ವ ಹಾಗೂ ಸಜ್ಜನಿಕೆ ಇತರರಿಗೆ ಮಾದರಿಯಾಗಿತ್ತು. ವಿಧಾನ ಪರಿಷತ್ ಮಾಜಿ ಸದಸ್ಯರಾಗಿ, ಮದ್ದೂರಿನ ಕಾಂಗ್ರೆಸ್ ಮುಖಂಡರಾಗಿ ಪಕ್ಷಕ್ಕೆ ಸಾಕಷ್ಟು ಕೊಡುಗೆ ನೀಡಿದ್ದಾರೆ. ಅವರು ರಾಜಕಾರಣಿ ಮಾತ್ರವಲ್ಲ, ಪ್ರಗತಿ ಪರ ರೈತರಾಗಿದ್ದರು. ಅವರ ಸಾವಿನ ನೋವು ಸಹಿಸಿಕೊಳ್ಳುವ ಶಕ್ತಿಯನ್ನು ಅವರ ಕುಟುಂಬದ ಸದಸ್ಯರು, ಬಂಧು-ಬಾಂಧವರಿಗೆ ಭಗವಂತ ಕರುಣಿಸಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಆತ್ಮಕ್ಕೆ ಶಾಂತಿ ಸಿಗಲಿ ಎಂದು ಸಂತಾಪ ಸೂಚಿಸಿದ್ದಾರೆ.

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ವೈ ಸಂತಾಪ:

ಬಿಜೆಪಿ ರಾಜ್ಯಾಧ್ಯಕ್ಷ ಬಿಎಸ್​ವೈ ಸಂತಾಪ

ಮಾಜಿ ವಿಧಾನಪರಿಷತ್ ಸದಸ್ಯರು ಹಾಗೂ ಮಾಜಿ ಮುಖ್ಯಮಂತ್ರಿ ಎಸ್ ಎಂ ಕೃಷ್ಣ ಅವರ ಸಹೋದರರಾದ ಎಸ್.ಎಂ ಶಂಕರ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಯಿತು. ದೇವರು ಅವರ ಕುಟುಂಬಕ್ಕೆ ದುಃಖ ಭರಿಸುವ ಶಕ್ತಿ ನೀಡಲಿ. ಅವರ ಆತ್ಮಕ್ಕೆ ಶಾಂತಿ ಸಿಗಲೆಂದು ಪ್ರಾರ್ಥಿಸುತ್ತೇನೆ ಎಂದು ಯಡಿಯೂರಪ್ಪ ತಿಳಿಸಿದ್ದಾರೆ.

For All Latest Updates

TAGGED:

ABOUT THE AUTHOR

...view details